Wednesday, June 24, 2026
HomeUncategorizedರಜನಿಕಾಂತ್ ಅಭಿನಯದ ‘ಕೂಲಿ’ ಚಿತ್ರದಲ್ಲಿ ರಚಿತಾ ರಾಮ್‍

ರಜನಿಕಾಂತ್ ಅಭಿನಯದ ‘ಕೂಲಿ’ ಚಿತ್ರದಲ್ಲಿ ರಚಿತಾ ರಾಮ್‍

- Advertisement -
- Advertisement -

ರಜನಿಕಾಂತ್‍ ಅಭಿನಯದ ‘ಕೂಲಿ’ ಚಿತ್ರದಲ್ಲಿ ರಚಿತಾ ರಾಮ್ ಕೂಡ ಅಭಿನಯಿಸಿದ್ದು, ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಇತ್ತೀಚೆಗೆ ಚೆನ್ನೈನಲ್ಲಷ್ಟೆ ‘ಕೂಲಿ’ ಚಿತ್ರದ ಟ್ರೇಲರ್ ಬಿಡುಗಡೆ ಕಾರ್ಯಕ್ರಮವು ನಡೆದಿದ್ದು, ಈ ಸಮಾರಂಭದಲ್ಲಿ ರಜನಿಕಾಂತ್, ನಾಗಾರ್ಜುನ, ಉಪೇಂದ್ರ, ಆಮೀರ್ ಖಾನ್‍ ಸೇರಿದಂತೆ ಹಲವರು ಭಾಗವಹಿಸಿದ್ದರು. ಎಲ್ಲ ಗಣ್ಯರ ಸಮ್ಮುಖದಲ್ಲಿ ಚಿತ್ರದ ಟ್ರೇಲರ್‍ ಬಿಡುಗಡೆಯಾಗಿದ್ದು, ಈ ಟ್ರೇಲರ್‌ನಲ್ಲಿ ರಚಿತಾ ರಾಮ್‍ ಅವರನ್ನು ಸಹ ನೋಡಬಹುದು.

ಚಿತ್ರದಲ್ಲಿ ದೊಡ್ಡ ತಾರಾ ಬಳಗವೇ ಇದ್ದು ಶ್ರುತಿ ಹಾಸನ್, ಸತ್ಯರಾಜ್‍ ಮುಂತಾದವರು ನಟಿಸಿದ್ದಾರೆ. ಲೋಕೇಶ್ ಕನಕರಾಜ್‍ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದು, ಈ ಚಿತ್ರವನ್ನು ಸನ್‍ ಪಿಕ್ಚರ್ಸ್ ಸಂಸ್ಥೆಯು ನಿರ್ಮಾಣ ಮಾಡುತ್ತಿದೆ. ಅನಿರುದ್ಧ್ ರವಿಚಂದರ್ ಸಂಗೀತ ಸಂಯೋಜಿಸಿರುವ ಈ ಚಿತ್ರವು ಆಗಸ್ಟ್ 14ರಂದು ಜಗತ್ತಿನಾದ್ಯಂತ ಬಿಡುಗಡೆ ಆಗುತ್ತಿದೆ.

- Advertisement -

Latest News

error: Content is protected !!