Thursday, June 4, 2026
Homeಕರಾವಳಿಮಂಗಳೂರು: ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಟೆಂಪೋ ಢಿಕ್ಕಿ; ರಾಮಕ್ಷತ್ರಿಯ ಸೇವಾ ಸಂಘದ ಅಧ್ಯಕ್ಷ ರಾಧಾಕೃಷ್ಣ ರಾವ್‌...

ಮಂಗಳೂರು: ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಟೆಂಪೋ ಢಿಕ್ಕಿ; ರಾಮಕ್ಷತ್ರಿಯ ಸೇವಾ ಸಂಘದ ಅಧ್ಯಕ್ಷ ರಾಧಾಕೃಷ್ಣ ರಾವ್‌ ಸಾವು

- Advertisement -
- Advertisement -

ಮಂಗಳೂರು: ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಟೆಂಪೋ ಢಿಕ್ಕಿಯಾಗಿ ಮಂಗಳೂರು ರಾಮಕ್ಷತ್ರಿಯ ಸೇವಾ ಸಂಘದ ಅಧ್ಯಕ್ಷ ರಾಧಾಕೃಷ್ಣ ರಾವ್‌ (65) ಸಾವನ್ನಪ್ಪಿರುವ ಘಟನೆ ಕುಚಿಕಾಡು ಎಂಬಲ್ಲಿ ನಡೆದಿದೆ.

ಬಿಕರ್ನಕಟ್ಟೆ ನಿವಾಸಿ ರಾಧಾಕೃಷ್ಣ ರಾವ್‌ ಅವರು ಸಂಜೆ 5.45ರ ಸುಮಾರಿಗೆ ಕಲ್ಪನೆ ಕಡೆಯಿಂದ ಬಿಕರ್ನಕಟ್ಟೆ ಕಡೆಗೆ ನಡೆದುಕೊಂಡು ಹೋಗುತ್ತಿದ್ದಾಗ ಟೆಂಪೋ ಢಿಕ್ಕಿ ಹೊಡೆದಿತ್ತು.ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫ‌ಲಕಾರಿಯಾಗದೆ ಅವರು ರಾತ್ರಿ 7.45ರ ಸುಮಾರಿಗೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಮೆಸ್ಕಾಂ ಜೆಪ್ಪು ಶಾಖೆಯ ಕಿರಿಯ ಅಭಿಯಂತರರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದ ಅವರು ಬಿಕರ್ನಕಟ್ಟೆಯ ಶ್ರೀ ಹರಿಹರ ಪಾಂಡುರಂಗ ವಿಠ್ಠಲ ಭಜನಾ ಮಂದಿರದ ಅಧ್ಯಕ್ಷರಾಗಿದ್ದರು. ಹಲವಾರು ಸಂಘ ಸಂಸ್ಥೆಗಳಲ್ಲಿ ತೊಡಗಿಸಿಕೊಂಡಿದ್ದರು. ಅವರು ಪತ್ನಿ ನಿವೃತ್ತ ಶಿಕ್ಷಕಿ ಗೌರಿ ರಾಧಾಕೃಷ್ಣ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.

- Advertisement -

Latest News

error: Content is protected !!