Wednesday, June 26, 2024
Homeಕರಾವಳಿನ್ಯಾಚುರಲ್ ಐಸ್ ಕ್ರೀಂ ಹಾಗೂ ಬೊಂಡ ಫ್ಯಾಕ್ಟರಿ ಸಂಸ್ಥಾಪಕ ರಘುನಂದನ್ ಕಾಮತ್ ನಿಧನ

ನ್ಯಾಚುರಲ್ ಐಸ್ ಕ್ರೀಂ ಹಾಗೂ ಬೊಂಡ ಫ್ಯಾಕ್ಟರಿ ಸಂಸ್ಥಾಪಕ ರಘುನಂದನ್ ಕಾಮತ್ ನಿಧನ

spot_img
- Advertisement -
- Advertisement -

ಮಂಗಳೂರು ಮೂಲದ ಖ್ಯಾತ ಉದ್ಯಮಿ, ಸದ್ಯ ಮುಂಬೈನಲ್ಲಿ ನೆಲೆಸಿದ್ದ ನ್ಯಾಚುರಲ್ ಐಸ್ ಕ್ರೀಂ ಹಾಗೂ ಬೊಂಡ ಫ್ಯಾಕ್ಟರಿ ಸಂಸ್ಥಾಪಕ ರಘುನಂದನ್ ಕಾಮತ್ ನಿಧನರಾಗಿದ್ದಾರೆ. ರಘುನಂದನ್ ಕಾಮತ್ (70) ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ರಾತ್ರಿ ಮುಂಬೈಯಲ್ಲಿ ವಿಧಿವಶರಾಗಿದ್ದಾರೆ.

ಅವರು ಪತ್ನಿ, ಇಬ್ಬರು ಪುತ್ರರು ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ. ತನ್ನ 14ನೇ ವಯಸ್ಸಿನಲ್ಲೇ ಮುಂಬೈಗೆ ತೆರಳಿದ್ದ ರಘುನಂದನ್ ಕಾಮತ್ ತನ್ನ ಸಹೋದರನ ರೆಸ್ಟೋರೆಂಟ್ ನಲ್ಲಿ ಕೆಲಸಕ್ಕೆ ಸೇರಿದರು.ಬಳಿಕ 1984 ರಲ್ಲಿ ಕೇವಲ 4 ಮಂದಿ ಸಿಬ್ಬಂದಿ ಜತೆ ನ್ಯಾಚುರಲ್ ಐಸ್ ಕ್ರೀಂ ಸಂಸ್ಥೆಯನ್ನು ಹುಟ್ಟು ಹಾಕಿದರು. ಪ್ರಸ್ತುತ ನ್ಯಾಚುರಲ್ ಸಂಸ್ಥೆ ದೇಶದಲ್ಲೇ ಪ್ರತಿಷ್ಠಿತ ಐಸ್ ಕ್ರೀಂ ಉದ್ಯಮವಾಗಿ ಸಾವಿರಾರು ಮಂದಿಗೆ ಉದ್ಯೋಗ ನೀಡುತ್ತಿದೆ. ದೇಶಾದ್ಯಂತ 156 ಔಟ್ ಲೆಟ್ ಹೊಂದಿದ್ದು, ವರ್ಷಕ್ಕೆ 400 ಕೋಟಿ ರೂ.ಗೂ ಅಧಿಕ ವ್ಯವಹಾರ ಮಾಡುತ್ತಿದೆ.

ಇನ್ನು ರಘುನಂದನ್ ಕಾಮತ್ ಅಷ್ಟು ದೊಡ್ಡ ಉದ್ಯಮಿಯಾಗಿದ್ದರೂ ತಮ್ಮ ಸರಳತೆಯ ಮೂಲಕವೇ ಎಲ್ಲರೂ ಮಾದರಿಯಾಗಿದ್ದರು.

- Advertisement -
spot_img

Latest News

error: Content is protected !!