Wednesday, July 3, 2024
Homeಕರಾವಳಿಉಡುಪಿನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಟಿಕೆಟ್ ಕೈ ತಪ್ಪಿದ ಹಿನ್ನೆಲೆ; ಮಾಜಿ ಶಾಸಕ ಕೆ. ರಘುಪತಿ...

ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಟಿಕೆಟ್ ಕೈ ತಪ್ಪಿದ ಹಿನ್ನೆಲೆ; ಮಾಜಿ ಶಾಸಕ ಕೆ. ರಘುಪತಿ ಭಟ್ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸೋದಾಗಿ ಘೋಷಣೆ

spot_img
- Advertisement -
- Advertisement -

ಉಡುಪಿ: ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಟಿಕೆಟ್ ಕೈ ತಪ್ಪಿದ ಹಿನ್ನೆಲೆ ಉಡುಪಿ ಮಾಜಿ ಶಾಸಕ ಕೆ. ರಘುಪತಿ ಭಟ್ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸೋದಾಗಿ ಘೋಷಣೆ ಮಾಡಿದ್ದಾರೆ.

ಉಡುಪಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಕಾರ್ಯಕರ್ತರ ಪ್ರತಿನಿಧಿಯಾಗಿ ನೈರುತ್ಯ ಪದವೀಧರ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ನಾನು ಸ್ಪರ್ಧೆ ಮಾಡುತ್ತೇನೆ ಎಂದು ಘೋಷಿಸಿದ್ದಾರೆ.

ಕಳೆದ ಬಾರಿ ವಿಧಾನಸಭಾ ಚುನಾವಣೆಯಲ್ಲಿಯೂ ಬಿಜೆಪಿ ಉಡುಪಿ ವಿಧಾನಸಭಾ ಕ್ಷೇತ್ರದ ಟಿಕೆಟ್ ನಿರಾಕರಿಸಿತ್ತು. ಆ ಸಂದರ್ಭದಲ್ಲಿಯೂ ಭಟ್ ಅವರು ಬೇಸರಗೊಂಡಿದ್ದರು. ಬಳಿಕ ಪಕ್ಷದ ವರಿಷ್ಠರು ವಿಧಾನ ಪರಿಷತ್ ನಲ್ಲಿ ಸ್ಪರ್ಧಿಸಲು ಅವಕಾಶ ನೀಡುವುದಾಗಿ ಭರವಸೆ ನೀಡಿದ್ದರು.ಆ ಬಳಿಕ ಪಕ್ಷದ ಅಧಿಕೃತ ಅಭ್ಯರ್ಥಿ ಪರವಾಗಿ ಪ್ರಚಾರ ನಡೆಸಿ, ಅಭ್ಯರ್ಥಿಯ ಗೆಲುವಿನಲ್ಲೂ ಪ್ರಮುಖ ಪಾತ್ರ ವಹಿಸಿದ್ದರು. ಅಲ್ಲದೆ, ಲೋಕಸಭೆ ಚುನಾವಣೆಯಲ್ಲೂ ಶಿವಮೊಗ್ಗ ಕ್ಷೇತ್ರದ ಉಸ್ತುವಾರಿಯನ್ನು ವಹಿಸಿಕೊಂಡು ಅಭ್ಯರ್ಥಿಯ ಪರವಾಗಿ ಉತ್ತಮವಾಗಿ ಕೆಲಸ ಮಾಡಿದ್ದರು.

ಇದೀಗ ಪದವೀಧರ ಚುನಾವಣೆಗೂ ಕೂಡ ಬಿಜೆಪಿ ಟಿಕೆಟ್ ನೀಡಿಲ್ಲವೆಂದು ಮಾಜಿ ಶಾಸಕ ರಘುಪತಿ ಭಟ್ ಅಸಮಾಧಾನ ಹೊರಹಾಕಿದ್ದು ನೈರುತ್ಯ ಪದವೀಧರ ಚುನಾವಣೆಗೆ ನಾನು ಪಕ್ಷೇತರವಾಗಿ ಸ್ಪರ್ಧಿಸುತ್ತೇನೆ. ಅಕಸ್ಮಾತ್ ಚುನಾವಣೆಯಲ್ಲಿ ಗೆದ್ದರು ಬಿಜೆಪಿಯಲ್ಲಿ ಇರುತ್ತೇನೆ ಎಂದಿದ್ದಾರೆ.

- Advertisement -
spot_img

Latest News

error: Content is protected !!