- Advertisement -
![]()
- Advertisement -
ಮೈಸೂರು: ವಿಧಾನ ಪರಿಷತ್ ನೈರುತ್ಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಗೆಲುವು ಸಾಧಿಸಿದ್ದು, ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿದ್ದ ಮಾಜಿ ಶಾಸಕ ರಘುಪತಿ ಭಟ್ ಸೋಲು ಕಂಡಿದ್ದಾರೆ.
ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿದ್ದ ಡಾ. ಧನಂಜಯ ಸರ್ಜಿ 37, 627 ಮತಗಳನ್ನು ಪಡೆದಿದ್ದು, 6,935 ಮತಗಳ ಅಂತರದಿಂದ ಗೆಲುವು ಪಡೆದಿದ್ದಾರೆ.
ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿದ್ದ ರಘುಪತಿ ಭಟ್ ಮೂರನೇ ಸ್ಥಾನಕ್ಕೆ ತಳ್ಳಲ್ಪಟ್ಟಿದ್ದು, 7,039 ಮತಗಳನ್ನು ಮಾತ್ರ ಪಡೆದಿದ್ದಾರೆ.ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಆಯನೂರು ಮಂಜುನಾಥ್ 13,516 ಮತಗಳನ್ನು ಪಡೆದು ಎರಡನೇ ಸ್ಥಾನಕ್ಕೆ ತೃಪ್ತಿಪಟ್ಟಿದ್ದಾರೆ.
ಗೆಲುವಿಗೆ 30,693 ಮತಗಳ ಕೋಟಾ ನಿಗದಿಯಾಗಿದ್ದು, ನಿಗದಿತ ಕೋಟಾಗಿಂತ 6,935 ಹೆಚ್ಚುವರಿ ಮತಗಳನ್ನು ಪಡೆದ ಧನಂಜಯ ಸರ್ಜಿ ಮೊದಲ ಪ್ರಾಶಸ್ತ್ಯದ ಮತಗಳಲ್ಲೇ ಗೆಲುವು ಪಡೆದಿದ್ದಾರೆ.ಈ ಮಧ್ಯೆ ಚಲಾವಣೆಯಾಗಿದ್ದ ಮತಗಳಲ್ಲಿ 5,115 ಮತಗಳು ಕುಲಗೆಟ್ಟು ಹೋಗಿವೆ.
- Advertisement -


