ಉಡುಪಿ : ವಿಧಾನ ಪರಿಷತ್ ಚುನಾವಣೆಗೆ ಟಿಕೆಟ್ ನೀಡಿಲ್ಲವೆಂದು ನೈರುತ್ಯ ಪದವೀಧರ ಕ್ಷೇತ್ರದ ಬಂಡಾಯ ಅಭ್ಯರ್ಥಿಯಾಗಿರುವ ಸ್ಪರ್ಧಿಸಿರುವ ಉಡುಪಿಯ ಮಾಜಿ ಶಾಸಕ ರಘುಪತಿ ಭಟ್ ಅವರನ್ನು 6 ವರ್ಷಗಳ ಕಾಲ ಬಿಜೆಪಿಯಿಂದ ಉಚ್ಛಾಟಿಸಿ ನಿನ್ನೆ ಆದೇಶ ಹೊರಡಿಸಲಾಗಿದೆ. ಅದರ ಬೆನ್ನಲ್ಲೇ ಇಂದು ರಘುಪತಿ ಭಟ್ ಉಡುಪಿಯಲ್ಲಿ ಸುದ್ದಿಗೋಷ್ಟಿ ನಡೆಸಿದ್ರು.
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ನಾನುಮೋದಿ ಹಾಗೂ ರಾಜ್ಯದ ನಾಯಕರಿಗೆ ಬೈದಿಲ್ಲ. ಬಿಜೆಪಿ ಪಕ್ಷದ ವ್ಯವಸ್ಥೆ ಕುರಿತು ಅಸಮಾಧಾನವಿದೆ ಎಂದು ತಿಳಿಸಿದರು.ಪಕ್ಷದ ನಾಯಕರನ್ನು ಟೀಕಿಸಿದ ಜಗದೀಶ್ ಶೆಟ್ಟರ್ ಮತ್ತೆ ಬಂದರು.ಪಕ್ಷಕ್ಕೆ ವಾಪಸ್ ಆಗಿ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ ಎಂದರು.
ಇದು ಶಾಶ್ವತವಾದ ವಜಾ ಅಲ್ಲ ಎಂದು ರಘುಪತಿ ಭಟ್ ತಿಳಿಸಿದರೂ. ಪರಿಷತ್ ಚುನಾವಣೆಯಲ್ಲಿ ಗೆದ್ದ ಮೇಲೆ ವಜಾ ರದ್ದಾಗುತ್ತದೆ.ಬಿಜೆಪಿ ಕಾರ್ಯಕರ್ತ ನನ್ನ ವಜಾ ಮಾಡಲು ಸಾಧ್ಯವಿಲ್ಲ ಎಂದು ನೈರುತ್ಯ ಪದವೀಧರ ಕ್ಷೇತ್ರದ ಬಂಡಾಯ ಅಭ್ಯರ್ಥಿ ರಘುಪತಿ ಭಟ್ ಆಕ್ರೋಶ ಹೊರಹಾಕಿದ್ದಾರೆ.