Monday, June 17, 2024
Homeಕರಾವಳಿಉಡುಪಿಉಡುಪಿ:ಬಿಜೆಪಿಯಿಂದ ಮಾಜಿ ಶಾಸಕ ರಘುಪತಿ ಭಟ್ ಆರು ವರ್ಷ ಉಚ್ಛಾಟನೆ

ಉಡುಪಿ:ಬಿಜೆಪಿಯಿಂದ ಮಾಜಿ ಶಾಸಕ ರಘುಪತಿ ಭಟ್ ಆರು ವರ್ಷ ಉಚ್ಛಾಟನೆ

spot_img
- Advertisement -
- Advertisement -

ಉಡುಪಿ: ನೈಋತ್ಯ ಪದವೀಧರ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿರುವ ಬಿಜೆಪಿಯ ಮಾಜಿ ಶಾಸಕ ರಘುಪತಿ ಭಟ್ ಅವರನ್ನು ಬಿಜೆಪಿ 6 ವರ್ಷಗಳ ಕಾಲ ಪಕ್ಷದಿಂದ ಉಚ್ಟಾಟನೆ ಮಾಡಲಾಗಿದೆ.


ಮಾಜಿ ಶಾಸಕ ರಘುಪತಿ ಭಟ್ ಅವರು ಈ ಬಾರಿಯ ನೈಋತ್ಯ ಪದವೀಧರ ಕ್ಷೇತ್ರದ ಬಿಜೆಪಿ ಟಿಕೆಟ್​​ ಪ್ರಬಲ ಆಕಾಂಕ್ಷಿಯಾಗಿದ್ದರು. ಆದರೆ, ಪಕ್ಷವು ಈ ಕ್ಷೇತ್ರದಿಂದ ಶಿವಮೊಗ್ಗದ ಡಾ. ಧನಂಜಯ ಸರ್ಜಿ ಅವರನ್ನು ಅಭ್ಯರ್ಥಿಯನ್ನಾಗಿ ಘೋಷಿಸಿತ್ತು. ಅಲ್ಲದೆ, ಶಿಕ್ಷಕರ ಕ್ಷೇತ್ರದ ಟಿಕೆಟ್ ಅನ್ನು ಜೆಡಿಎಸ್ ಪಕ್ಷದ ಚಿಕ್ಕಮಗಳೂರು ಅಭ್ಯರ್ಥಿಗೆ ನೀಡಿತ್ತು. ಇದು ರಘುಪತಿ ಭಟ್ ಅವರ ಅಸಮಾಧಾನಕ್ಕೆ ಕಾರಣವಾಗಿತ್ತು. ಹೀಗಾಗಿ ಅವರು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು. ಅಲ್ಲದೇ ಕಣದಿಂದ ಹಿಂದೆ ಸರಿಯುವಂತೆ ಅವರಲ್ಲಿ ಮನವಿ ಮಾಡಲಾಗಿತ್ತು. ಆಜದರೆ ಅವರು ಮನವಿಗೆ ಸ್ಪಂದಿಸಿರಲಿಲ್ಲ. ಇದೀಗ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ.

- Advertisement -
spot_img

Latest News

error: Content is protected !!