Saturday, June 6, 2026
Homeತಾಜಾ ಸುದ್ದಿಧರ್ಮಸ್ಥಳ: ಕಡಿಯಾಳಿ ಬ್ರಹ್ಮಕಲಶೋತ್ಸವಕ್ಕೆ ಡಾ.ವೀರೇಂದ್ರ ಹೆಗ್ಗಡೆಯವರನ್ನು ಆಹ್ವಾನಿಸಿದ ಶಾಸಕ ರಘುಪತಿ ಭಟ್

ಧರ್ಮಸ್ಥಳ: ಕಡಿಯಾಳಿ ಬ್ರಹ್ಮಕಲಶೋತ್ಸವಕ್ಕೆ ಡಾ.ವೀರೇಂದ್ರ ಹೆಗ್ಗಡೆಯವರನ್ನು ಆಹ್ವಾನಿಸಿದ ಶಾಸಕ ರಘುಪತಿ ಭಟ್

- Advertisement -
- Advertisement -

ಧರ್ಮಸ್ಥಳ : ಮೇ ತಿಂಗಳಲ್ಲಿ ನಡೆಯಲಿರುವ ಕಡಿಯಾಳಿ ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆಯವರನ್ನು ಆಮಂತ್ರಿಸಲಾಯಿತು. ಜೀರ್ಣೋದ್ಧಾರ ಸಮಿತಿಯ ಗೌರವಾಧ್ಯಕ್ಷರು, ಶಾಸಕರಾದ ಕೆ. ರಘುಪತಿ ಭಟ್ ರವರ ನೇತೃತ್ವದಲ್ಲಿ ಭೇಟಿಯಾಗಿ ಬ್ರಹ್ಮಕಲಶೋತ್ಸವಕ್ಕೆ ಆಮಂತ್ರಣ ಪತ್ರಿಕೆ ನೀಡಲಾಯಿತು.

ಈ ಸಂದರ್ಭದಲ್ಲಿ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ನಾಗೇಶ್ ಹೆಗ್ಡೆ, ವ್ಯವಸ್ಥಾಪನ ಮಂಡಳಿಯ ಅಧ್ಯಕ್ಷರಾದ ಡಾ. ರವಿರಾಜ್ ಆಚಾರ್ಯ, ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರಾದ ಪುರುಶೋತ್ತಮ್ ಶೆಟ್ಟಿ, ಜೀರ್ಣೋದ್ಧಾರ ಸಮಿತಿಯ ಪ್ರಧಾನ ಕಾರ್ಯದರ್ಶಿಗಳಾದ ರಾಘವೇಂದ್ರ ಕಿಣಿ, ದೇವಳದ ಅರ್ಚಕರಾದ ರಾಧಾಕೃಷ್ಣ ಉಪಾಧ್ಯ, ಬ್ರಹ್ಮಕಲಶೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ನಿತ್ಯಾನಂದ ಕಾಮತ್ ಕಡಿಯಾಳಿ, ನಗರಸಭಾ ಸದಸ್ಯರಾದ ಗಿರೀಶ್ ಅಂಚನ್, ಜೀರ್ಣೋದ್ಧಾರ ಸಮಿತಿಯ ಸದಸ್ಯರಾದ ಸತೀಶ್ ಕುಲಾಲ್, ರಾಕೇಶ್ ಜೋಗಿ, ಅಶ್ವಥ್ ದೇವಾಡಿಗ, ಸಂತೋಷ್ ಕಿಣಿ, ಚೇತನ್ ಕುಮಾರ್ ಕಡಿಯಾಳಿ, ಸದಾನಂದ ಪೂಜಾರಿ ಉಪಸ್ಥಿತರಿದ್ದರು.

- Advertisement -

Latest News

error: Content is protected !!