Friday, May 3, 2024
Homeಕರಾವಳಿಹಿರಿಯ ವಿದ್ಯಾರ್ಥಿಗಳಿಂದ ಕಿರಿಯ ವಿದ್ಯಾರ್ಥಿಗಳಿಗೆ ರ್ಯಾಗಿಂಗ್: ಮಂಗಳೂರಿನಲ್ಲಿ ನರ್ಸಿಂಗ್ ಕಾಲೇಜಿನ 18 ವಿದ್ಯಾರ್ಥಿಗಳ ವಿರುದ್ಧ ಪ್ರಕರಣ...

ಹಿರಿಯ ವಿದ್ಯಾರ್ಥಿಗಳಿಂದ ಕಿರಿಯ ವಿದ್ಯಾರ್ಥಿಗಳಿಗೆ ರ್ಯಾಗಿಂಗ್: ಮಂಗಳೂರಿನಲ್ಲಿ ನರ್ಸಿಂಗ್ ಕಾಲೇಜಿನ 18 ವಿದ್ಯಾರ್ಥಿಗಳ ವಿರುದ್ಧ ಪ್ರಕರಣ ದಾಖಲು

spot_img
- Advertisement -
- Advertisement -

ಮಂಗಳೂರು: ದೇರಳಕಟ್ಟೆಯ ಕಣಚೂರು ಎಜುಕೇಷನ್ ಇನ್ಸ್ ಟಿಟ್ಯೂಟ್ ಸಂಸ್ಥೆಯ ಬಿಪಿಟಿ (ಬ್ಯಾಚುಲರ್ ಆಫ್ ಫಿಸಿಯೋಥೆರಪಿ) ವಿಭಾಗದಲ್ಲಿ ರ್ಯಾಗಿಂಗ್ ಆರೋಪಗಳು ಕೇಳಿ ಬಂದ ಹಿನ್ನೆಲೆಯಲ್ಲಿ 18 ಮಂದಿ ವಿದ್ಯಾರ್ಥಿಗಳ ವಿರುದ್ಧ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಿಪಿಟಿ ವಿಭಾಗದ ಪ್ರಥಮ ವರ್ಷದ 5 ವಿದ್ಯಾರ್ಥಿಗಳಿಗೆ ಅದೇ ಕಾಲೇಜಿನ 18 ಮಂದಿ ಹಿರಿಯ ವಿದ್ಯಾರ್ಥಿಗಳು ರ್ಯಾಗಿಂಗ್ ಮಾಡಿ ಮಾಡಿದ್ದಾರೆಂಬ ಆರೋಪಗಳು ಕೇಳಿ ಬಂದಿತ್ತು.

ಫೆ.4 ರಂದು ಘಟನೆ ನಡೆಸಿದ್ದು, ಈ ಬಗ್ಗೆ ಕಾಲೇಜಿನ ಆಡಳಿತ ಮಂಡಳಿ ಫೆ.8ರಂದು ಠಾಣೆಯಲ್ಲಿ ದೂರು ದಾಖಲು ಮಾಡಿದೆ ಎಂದು ತಿಳಿದುಬಂದಿದೆ.

ಕಾಲೇಜಿನ ಹಿರಿಯ ವಿದ್ಯಾರ್ಥಿಗಳು ತಮ್ಮ ತರಗತಿ ಕೋಣೆಗೆ ಕಿರಿಯ ವಿದ್ಯಾರ್ಥಿಗಳನ್ನು ಒತ್ತಾಯಪೂರ್ವಕವಾಗಿ ಕರೆಸಿಕೊಂಡಿದ್ದು, ಈ ವೇಳೆ ತಮ್ಮೆದುರು ತಲೆ ತಗ್ಗಿಸಿ ನಿಲ್ಲಬೇಕೆಂದು ಬೆದರಿಕೆ ಹಾಕಿದ್ದಾರೆ. ಅಲ್ಲದೆ, ತಮ್ಮನ್ನು ಟಾರ್ಗೆಟ್ ಮಾಡಿಕೊಂಡು ತಳ್ಳಾಟ ನಡೆಸಿದ್ದರು ಎಂದು ಕಿರಿಯ ವಿದ್ಯಾರ್ಥಿಗಳು ದೂರಿನಲ್ಲಿ ಹೇಳಿದ್ದಾರೆ ಎನ್ನಲಾಗಿದೆ.

- Advertisement -
spot_img

Latest News

error: Content is protected !!