Saturday, June 6, 2026
Homeತಾಜಾ ಸುದ್ದಿಅಪ್ಪ-ಅಮ್ಮನ ಮದ್ವೆ ವಾರ್ಷಿಕೋತ್ಸವವನ್ನು ವಿನೂತನವಾಗಿ ಆಚರಿಸಿದ ನಟಿ ರಾಗಿಣಿ

ಅಪ್ಪ-ಅಮ್ಮನ ಮದ್ವೆ ವಾರ್ಷಿಕೋತ್ಸವವನ್ನು ವಿನೂತನವಾಗಿ ಆಚರಿಸಿದ ನಟಿ ರಾಗಿಣಿ

- Advertisement -
- Advertisement -

ಬೆಂಗಳೂರು: ತಮ್ಮ ಅಪ್ಪ-ಅಮ್ಮ ಮದುವೆ ವಾರ್ಷಿಕೋತ್ಸವದ ವಿಶೇಷ ದಿನವನ್ನು ಕೊರೊನಾ ವಾರಿಯರ್ಸ್‍ಗೆ ಆಹಾರ ಹಂಚುವ ಮೂಲಕ ಕನ್ನಡ ಚಿತ್ರನಟಿ ರಾಗಿಣಿ ದ್ವಿವೇದಿ ಅರ್ಥಪೂರ್ಣವಾಗಿ ಆಚರಿಸಿದ್ದಾರೆ.

ವೈದ್ಯರು, ನರ್ಸ್, ವೈದ್ಯಕೀಯ ಸಿಬ್ಬಂದಿ ಹಗಲು ರಾತ್ರಿಯನ್ನದೆ ರೋಗಿಗಳ ಸೇವೆಯಲ್ಲಿ ತೊಡಗಿ ಕೊರೊನಾ ಸೋಂಕಿನ ವಿರುದ್ಧ ಹೋರಾಡುತ್ತಿದ್ದಾರೆ. ಈ ಸಂದರ್ಭದಲ್ಲಿ ರಾಗಿಣಿ ತಮ್ಮ ತಂಡದೊಂದಿಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿರುವ 300ಕ್ಕೂ ಹೆಚ್ಚು ಸಿಬ್ಬಂದಿಗೆ ಆಹಾರ ಹಂಚಿದ್ದಾರೆ. ಈ ಮೂಲಕ ಅಪ್ಪ-ಅಮ್ಮನ ವಿವಾಹ ವಾರ್ಷಿಕೋತ್ಸವ ಆಚರಿಸಿ, ಹೆತ್ತವರಿಗೆ ಒಂದೊಳ್ಳೆ ಉಡುಗೊರೆ ನೀಡಿದ್ದಾರೆ.

ಈ ಬಗ್ಗೆ ತಮ್ಮ ಟ್ವಿಟ್ಟರ್ ನಲ್ಲಿ ಹಂಚಿಕೊಂಡಿರುವ ರಾಗಿಣಿ, ಆರ್‌ಡಿ ವೆಲ್‍ಫೇರ್ ವತಿಯಿಂದ 300ಕ್ಕೂ ಹೆಚ್ಚು ಮಂದಿ ಸರ್ಕಾರಿ ಆಸ್ಪತ್ರೆಯ ಕೊರೊನಾ ವಾರಿಯರ್ಸ್‍ಗೆ ಊಟ, ಸಿಹಿ ಹಂಚಿದ್ದೇವೆ. ನಮಗೆ ಹೀಗೆ ಬೆಂಬಲ ನೀಡುತ್ತಿರಿ ಎಂದು ಬರೆದು ಊಟ ನೀಡುತ್ತಿರುವ ಫೋಟೋಗಳನ್ನು ಟ್ವೀಟ್ ಮಾಡಿದ್ದಾರೆ.

- Advertisement -

Latest News

error: Content is protected !!