Wednesday, July 2, 2025
Homeತಾಜಾ ಸುದ್ದಿಇನ್ನೂ ಮೂರು ದಿನಗಳ ಕಾಲ ಮುದ್ದೆ ಮುರಿಯಬೇಕಿದೆ ರಾಗಿಣಿ

ಇನ್ನೂ ಮೂರು ದಿನಗಳ ಕಾಲ ಮುದ್ದೆ ಮುರಿಯಬೇಕಿದೆ ರಾಗಿಣಿ

spot_img
- Advertisement -
- Advertisement -

ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ಜೈಲು ಸೇರಿರುವ ಸ್ಯಾಂಡಲ್​ವುಡ್​ ನಟಿ ರಾಗಿಣಿ ಜಾಮೀನು ಅರ್ಜಿ ವಿಚಾರಣೆ ಇಂದು ನಡೆಯಬೇಕಾಗಿತ್ತು. ಆದರೆ ಕಾರಣಾಂತರಗಳಿಂದ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆಯಾಗಿದೆ. ಸೆಪ್ಟೆಂಬರ್​ 19ಕ್ಕೆ ಮತ್ತೆ ವಿಚಾರಣೆ ನಡೆಯಲಿದ್ದು, ಅಂದು ರಾಗಿಣಿಗೆ ಬೇಲ್​ ಸಿಗುತ್ತದೋ ಇಲ್ಲವೋ ಎಂಬುದು ಗೊತ್ತಾಗಬೇಕಿದೆ.

ಸೋಮವಾರ ವಿಚಾರಣೆವೇಳೆ ರಾಗಿಣಿಗೆ 1ನೇ ಎಸಿಎಂಎಂ ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಆದೇಶಿಸಿತ್ತು. ಈ ಸಂಬಂಧ, ರಾಗಿಣಿ ಪರ ವಕೀಲರು ಮಧ್ಯಂತರ ಜಾಮೀನು ಅರ್ಜಿ ಹಾಕಿದ್ದರು. ಇಂದು ಅರ್ಜಿ ನ್ಯಾಯಾಲಯದ ಮುಂದೆ ಬಂದಾಗ, ನ್ಯಾಯಲಯವು ಸೆಪ್ಟೆಂಬರ್ 19ಕ್ಕೆ ಮುಂದೂಡಿ ಆದೇಶಿಸಿತು.
ತನಿಖೆ ಪ್ರಗತಿಯಲ್ಲಿರುವುದರಿಂದ, ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ಬೇಕೆಂದು ಸಿಸಿಬಿ ಮನವಿ ನೀಡಿದೆ. ಈ ಹಿನ್ನೆಲೆಯಲ್ಲಿ ನ್ಯಾಯಾಲಯವು ಮೂರು ದಿನಗಳ ಕಾಲ ಅವಧಿ ವಿಸ್ತರಿಸಿದೆ. ಈ ಮೂಲಕ ರಾಗಿಣಿ ಇನ್ನೂ ಮೂರು ದಿನಗಳ ಕಾಲ ಜೈಲಿನಲ್ಲೇ ಇರುವ ಅನಿವಾರ್ಯತೆಯಿದೆ.

- Advertisement -
spot_img

Latest News

error: Content is protected !!