Sunday, June 7, 2026
Homeಪ್ರಮುಖ-ಸುದ್ದಿಸಿದ್ದರಾಮಯ್ಯಗೆ ದೂರವಾಣಿ ಕರೆ ಮಾಡಿ ಆರೋಗ್ಯ ವಿಚಾರಿಸಿದ ರಾಹುಲ್ ಗಾಂಧಿ

ಸಿದ್ದರಾಮಯ್ಯಗೆ ದೂರವಾಣಿ ಕರೆ ಮಾಡಿ ಆರೋಗ್ಯ ವಿಚಾರಿಸಿದ ರಾಹುಲ್ ಗಾಂಧಿ

- Advertisement -
- Advertisement -

ಬೆಂಗಳೂರು : ಕೊರೊನಾ ವೈರಸ್ ಸೋಂಕಿನಿಂದ ಶೀಘ್ರ ಗುಣಮುಖರಾಗುವಂತೆ ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಶುಭ ಹಾರೈಸಿದ್ದಾರೆ.

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಿದ್ದರಾಮಯ್ಯ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ ರಾಹುಲ್ ಗಾಂಧಿ ಅವರು ಸಿದ್ದರಾಮಯ್ಯ ಅವರ ಆರೋಗ್ಯ ವಿಚಾರಿಸಿದ್ದಾರೆ. ರಾಜ್ಯ ಉಸ್ತುವಾರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರೂ ಸಿದ್ದರಾಮಯ್ಯ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿ ಶೀಘ್ರ ಗುಣಮುಖರಾಗುವಂತೆ ಹಾರೈಸಿದರು.

ಕೊರೊನಾ ವೈರಸ್ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಕಳೆದ ನಾಲ್ಕ ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರೊಂದಿಗೆ ಪುತ್ರ ಹಾಗು ವರುಣಾ ಕ್ಷೇತ್ರದ ಶಾಸಕ ಡಾ. ಯತೀಂದ್ರ ಅವರು ಮಣಿಪಾಲ್ ಆಸ್ಪತ್ರೆಯಲ್ಲಿ ಕೊರೊನಾ ವೈರಸ್‌ಗೆ ಚಿಕಿತ್ಸೆ ಪಡೆಯುತ್ತಿದ್ದಾರೆ.

- Advertisement -

Latest News

error: Content is protected !!