Thursday, June 4, 2026
Homeತಾಜಾ ಸುದ್ದಿಕೋಲಾರದಿಂದ ಸ್ಪರ್ಧಿಸದಂತೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಸಲಹೆ ನೀಡಿದ ರಾಹುಲ್ ಗಾಂಧಿ

ಕೋಲಾರದಿಂದ ಸ್ಪರ್ಧಿಸದಂತೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಸಲಹೆ ನೀಡಿದ ರಾಹುಲ್ ಗಾಂಧಿ

- Advertisement -
- Advertisement -

ನವದೆಹಲಿ : ಈ ಬಾರಿಯ ಚುನಾವಣೆಯಲ್ಲಿ ತಾನು ಕೋಲಾರದಿಂದ ಸ್ಪರ್ಧಿಸುವುದಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ ಘೋಷಿಸಿದ್ದರು. ಆದರೆ ಇದೀಗ ಕೋಲಾರದಿಂದ ಸ್ಪರ್ಧಿಸದಂತೆ ಸಿದ್ದರಾಮಯ್ಯ ಅವರಿಗೆ ರಾಹುಲ್ ಗಾಂಧಿ ಸಲಹೆ ನೀಡಿದ್ದಾರೆ ಎನ್ನಲಾಗಿದೆ.

ನಿನ್ನೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಕಾಂಗ್ರೆಸ್​ನ ಕೇಂದ್ರ ಚುನಾವಣಾ ಸಮಿತಿ ಸಭೆ ನಡೆದಿದ್ದು, 125 ಅಭ್ಯರ್ಥಿಗಳ ಹೆಸರು ಅಂತಿಮಗೊಳಿಸಲಾಗಿದೆ.ಸುಮಾರು 3 ಗಂಟೆಗಳ ಕಾಲ ನಡೆದ ಸಭೆಯಲ್ಲಿ 125 ಕ್ಷೇತ್ರಗಳ ಅಭ್ಯರ್ಥಿಗಳ ಬಗ್ಗೆ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗಿದೆ.

71 ಮಂದಿ ಹಾಲಿ ಶಾಸಕರಿಗೆ ಮತ್ತೆ ಟಿಕೆಟ್​ ನೀಡಲು ಸಭೆಯಲ್ಲಿ ನಿರ್ಧರಿಸಲಾಗಿದೆ. ಯುಗಾದಿ ಹಬ್ಬದ ನಂತರ ಪಟ್ಟಿ ಬಿಡುಗಡೆ ಮಾಡಲು ಕಾಂಗ್ರೆಸ್ ನಾಯಕರು ನಿರ್ಧರಿಸಿದ್ದಾರೆ. ಇದೇ ವೇಳೆ ಸಿದ್ದರಾಮಯ್ಯ ಅವರಿಗೆ ರಾಹುಲ್ ಗಾಂಧಿ ಮಹತ್ವದ ಸಲಹೆಯೊದನ್ನು ನೀಡಿದ್ದು, ಕೋಲಾರ ಕ್ಷೇತ್ರದಿಂದ ಸ್ಪರ್ಧಿಸಿದಂತೆ ಸಲಹೆ ನೀಡಿದ್ದಾರೆ ಎನ್ನಲಾಗಿದೆ. ಕೋಲಾರದಿಂದ ಸ್ಪರ್ಧೆ ಮಾಡಬೇಡಿ, ವರುಣಾ ಕ್ಷೇತ್ರದಿಂದಲೇ ಸ್ಪರ್ಧಿಸುವಂತೆ ರಾಹುಲ್ ಗಾಂಧಿ ಸಲಹೆ ನೀಡಿದ್ದಾರೆ ಎಂದು ಹೇಳಲಾಗಿದೆ.

- Advertisement -

Latest News

error: Content is protected !!