Friday, June 5, 2026
Homeಕರಾವಳಿಉಡುಪಿಏ.27ರಂದು ಉಡುಪಿಗೆ ಆಗಮಿಸಲಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ

ಏ.27ರಂದು ಉಡುಪಿಗೆ ಆಗಮಿಸಲಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ

- Advertisement -
- Advertisement -

ಉಡುಪಿ: ಏ.27ರಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಉಡುಪಿಗೆ ಆಗಮಿಸಲಿದ್ದಾರೆ.  ರಾಜ್ಯ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಉಡುಪಿ ಜಿಲ್ಲೆಗೆ ಆಗಮಿಸಲಿದ್ದು, ಅಂದು ಅವರು ಉಚ್ಚಿಲದಲ್ಲಿ ಮೀನುಗಾರ ರೊಂದಿಗೆ ಸಂವಾದ ನಡೆಸಲಿದ್ದಾರೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ತಿಳಿಸಿದ್ದಾರೆ.

ಉಡುಪಿ ಕಾಂಗ್ರೆಸ್ ಭವನದಲ್ಲಿ ಇಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ರಾಜ್ಯ ವಿಧಾನಸಭಾ ಚುನಾವಣೆ ಸಂಬಂಧ 40 ಮಂದಿ ಸ್ಟಾರ್ ಕ್ಯಾಂಪೆನ್ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಅದರಲ್ಲಿ ಹಲವು ಮಂದಿ ನಾಯಕರು ಜಿಲ್ಲೆಗೆ ಆಗಮಿಸಿ ಪ್ರಚಾರ ಕಾರ್ಯ ನಡೆಸಲಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಕಾಂಗ್ರೆಸ್ ಪರವಾದ ಹವಾ ಇದ್ದು, ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಪರವಾದ ಅಚ್ಚರಿ ಫಲಿತಾಂಶ ಹೊರಬೀಳಲಿದೆ ಎಂದರು.

- Advertisement -

Latest News

error: Content is protected !!