Monday, June 17, 2024
Homeತಾಜಾ ಸುದ್ದಿಬಿಜೆಪಿ ಸರ್ಕಾರದ 40% ಕಮಿಷನ್ ತನ್ನದೇ ಪಕ್ಷದ ಕಾರ್ಯಕರ್ತನ ಜೀವ ಪಡೆದಿದೆ: ರಾಹುಲ್ ಗಾಂಧಿ ಟ್ವೀಟ್

ಬಿಜೆಪಿ ಸರ್ಕಾರದ 40% ಕಮಿಷನ್ ತನ್ನದೇ ಪಕ್ಷದ ಕಾರ್ಯಕರ್ತನ ಜೀವ ಪಡೆದಿದೆ: ರಾಹುಲ್ ಗಾಂಧಿ ಟ್ವೀಟ್

spot_img
- Advertisement -
- Advertisement -

ನವದೆಹಲಿ: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ ಸಂಬಂಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರತಿಕ್ರಿಯೆ ನೀಡಿದ್ದು, ಬಿಜೆಪಿ ಸರ್ಕಾರದ 40 ಪರ್ಸೆಂಟ್ ಕಮಿಷನ್ ಬಿಜೆಪಿ ಪಕ್ಷದ ಕಾರ್ಯಕರ್ತನ ಜೀವ ಪಡೆದಿದೆ ಎಂದು ಹೇಳಿದ್ದಾರೆ.

ಸಂತೋಷ್ ಪಾಟೀಲ್ ಆತ್ಮಹತ್ಯೆ ಸಂಬಂಧ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, ಕರ್ನಾಟಕದಲ್ಲಿ ಬಿಜೆಪಿಯ 40% ಕಮಿಷನ್ ಸರ್ಕಾರವು ತಮ್ಮದೇ ಆದ ಕಾರ್ಯಕರ್ತನ ಜೀವವನ್ನು ಬಲಿ ತೆಗೆದುಕೊಂಡಿದೆ.

ಸಂತೋಷ್ ಪಾಟೀಲ್ ಪ್ರಧಾನಿಗೆ ನೀಡಿದ ದೂರಿಗೆ ಇದುವರೆಗೂ ಉತ್ತರ ಸಿಕ್ಕಿಲ್ಲ. ಇದರಲ್ಲಿ ಮುಖ್ಯಮಂತ್ರಿ ಮತ್ತು ಪ್ರಧಾನಿ ಮಂತ್ರಿ ಸಹ ಭಾಗಿದಾರರು ಎಂದು ರಾಹುಲ್ ಗಾಂಧಿ ಆರೋಪ ಮಾಡಿದ್ದಾರೆ.

ಸಚಿವ ಕೆ. ಎಸ್. ಈಶ್ವರಪ್ಪ ವಿರುದ್ಧ 40% ಕಮಿಷನ್ ಆರೋಪ ಮಾಡಿದ್ದ ಗುತ್ತಿಗೆದಾರ ಸಂತೋಷ್ ಪಾಟೀಲ್, ತಮ್ಮ ಆರೋಪ ಭಾರೀ ಚರ್ಚೆಗೆ ಗ್ರಾಸವಾಗಿರುವ ನಡುವಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದೀಗ ಅವರ ಮರಣ ಪತ್ರ ಸಾಕಷ್ಟು ಸದ್ದು ಮಾಡ್ತಿದೆ. ಸಾವಿಗೂ ಮುನ್ನ ತಮ್ಮ ಮರಣ ಸಂದೇಶವನ್ನು ಮೊಬೈಲ್ ಮೂಲಕ ಕಳಿಸಿರುವ ಸಂತೋಷ್ ಪಾಟೀಲ್, ಉಡುಪಿಯ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣ ಸಮೀಪದ ಶಾಂಭವಿ ಲಾಡ್ಜ್ ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

- Advertisement -
spot_img

Latest News

error: Content is protected !!