Sunday, June 29, 2025
Homeಕರಾವಳಿಮಂಗಳೂರಿನ ಪಬ್ಬಾಸ್ ನಲ್ಲಿ ಐಸ್ ಕ್ರೀಂ ಸವಿದ ರಾಹುಲ್ ಗಾಂಧಿ

ಮಂಗಳೂರಿನ ಪಬ್ಬಾಸ್ ನಲ್ಲಿ ಐಸ್ ಕ್ರೀಂ ಸವಿದ ರಾಹುಲ್ ಗಾಂಧಿ

spot_img
- Advertisement -
- Advertisement -

ಮಂಗಳೂರು: ಚುನಾವಣಾ ಪ್ರಚಾರಕ್ಕಾಗಿ ಮಂಗಳೂರಿಗೆ ಆಗಮಿಸಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ  ಮಂಗಳೂರಿನ ಪ್ರಖ್ಯಾತ ಐಸ್ ಕ್ರೀಮ್ ಪಾರ್ಲರ್ ಪಬ್ಬಾಸ್ ನಲ್ಲಿ ಐಸ್ ಕ್ರೀಂ ಸವಿದು ಖುಷಿ ಪಟ್ಟಿದ್ದಾರೆ.

ಮಂಗಳೂರಿನ ಲಾಲ್ ಬಾಗ್ ನಲ್ಲಿರುವ ಪಬ್ಬಾಸ್ ಐಸ್ ಕ್ರೀಮ್ ಪಾರ್ಲರ್ ಗೆ ಕಾಂಗ್ರೆಸ್ ಮುಖಂಡರೊಂದಿಗೆ ಭೇಟಿ ನೀಡಿದ ರಾಹುಲ್ ಗಾಂಧಿ ಐಸ್ ಕ್ರೀಂ ಸವಿದಿದ್ದಾರೆ. ಈ ವೇಳೆ ಡಿ ಕೆ ಶಿವಕುಮಾರ್ , ಕೆ ಸಿ ವೇಣುಗೋಪಾಲ್, ಮಹಮ್ಮದ್ ನಲ್ಪಾಡ್ ಸೇರಿದಂತೆ ಇತರ ಕಾಂಗ್ರೆಸ್ ಮುಖಂಡರು ರಾಹುಲ್ ಗಾಂಧಿ ಗೆ ಜೊತೆಯಾಗಿದ್ದಾರೆ.

ಬಿಗಿ ಭದ್ರತೆಯೊಂದಿಗೆ ಐಸ್ ಕ್ರೀಮ್ ಪಾರ್ಲರ್ ಗೆ ಆಗಮಿಸಿದ್ದ ರಾಹುಲ್ ಗಾಂಧಿಯನ್ನು ಭೇಟಿ ಮಾಡಲು ಜನ ಸೇರಿದ್ದು, ರಾಹುಲ್ ಗಾಂಧಿಯೊಂದಿಗೆ ಸೆಲ್ಫಿಗೆ ಮುಗಿಬಿದ್ದಿದ್ದಾರೆ.  ಬಳಿಕ ರಾಹುಲ್ ಗಾಂಧಿ ಅಲ್ಲಿದ್ದ ಗ್ರಾಹಕರ ಜೊತೆ ಸೆಲ್ಫಿಗೆ ಪೋಸ್ ಕೊಟ್ಟಿದ್ದಾರೆ.

- Advertisement -
spot_img

Latest News

error: Content is protected !!