Saturday, June 6, 2026
Homeತಾಜಾ ಸುದ್ದಿಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬಕ್ಕೆ ರಾಹುಲ್ ಗಾಂಧಿ ವಿಶ್ ಮಾಡಿದ್ದು ಹೇಗೆ ?

ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬಕ್ಕೆ ರಾಹುಲ್ ಗಾಂಧಿ ವಿಶ್ ಮಾಡಿದ್ದು ಹೇಗೆ ?

- Advertisement -
- Advertisement -

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಗುರುವಾರ 70ನೇ ವರ್ಷಕ್ಕೆ ಕಾಲಿರಿಸಿದ್ದಾರೆ. ಈ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರು ಸೇವಾ ಸಪ್ತಾಹ ಆಚರಿಸುತ್ತಿದ್ದಾರೆ. ದೇಶ ವಿದೇಶಗಳ ರಾಜಕೀಯ ಪ್ರಮುಖರು, ಅವರ ಅಭಿಮಾನಿಗಳು ಹಾಗೂ ವಿರೋಧಿಗಳು ಕೂಡ ಜನ್ಮದಿನದ ಶುಭಾಶಯ ಕೋರಿದ್ದಾರೆ.

ಪ್ರಧಾನಿ ಮೋದಿ ಅವರಿಗೆ ಜನ್ಮದಿನದ ಶುಭಾಶಯ ಹಾರೈಸಿರುವ ಮಾಜಿ ಪ್ರಧಾನಿ ಎಚ್. ಡಿ ದೇವೇಗೌಡ, ನಿಮಗೆ ಆರೋಗ್ಯ ಹಾಗೂ ಸಂತೋಷ ಸಿಗಲಿ ಎಂದು ದೇವರನ್ನು ಪ್ರಾರ್ಥಿಸುವುದಾಗಿ ತಿಳಿಸಿದ್ದಾರೆ.

ತಾಯಿ ಸೋನಿಯಾ ಗಾಂಧಿ ಜತೆಗೆ ವಿದೇಶಕ್ಕೆ ತೆರಳಿರುವ ಕಾಂಗ್ರೆಸ್ ಕಣ್ಮಣಿ ರಾಹುಲ್ ಗಾಂಧಿ ಗುರುವಾರ ಬೆಳಗ್ಗೆ 7.11ಕ್ಕೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಹ್ಯಾಪಿ ಬರ್ತ್​ ಡೇ ಎಂದು ವಿಶ್ ಮಾಡಿದ್ದಾರೆ. ಇದೇ ವೇಳೆ, ಕಾಂಗ್ರೆಸ್ಸಿಗರು ಮತ್ತು ಅವರ ಬೆಂಬಲಿಗರು ಟ್ವಿಟರ್​ನಲ್ಲಿ ಬೇರೋಜಗಾರಿ ದಿವಸ್ ಎಂಬ ವಿಚಾರವನ್ನು ಇಟ್ಟುಕೊಂಡು ಟ್ರೆಂಡಿಂಗ್ ಸೃಷ್ಟಿಸಲು ಪ್ರಯತ್ನಿಸಿದ್ದಾರೆ. ಆ ಮೂಲಕ ಮೋದಿಯವರ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಲು ಮುಂದಾಗಿದ್ದಾರೆ.

ನ್ಯಾಷನಲ್ ಅನ್​ಎಂಪ್ಲಾಯ್​ಮೆಂಟ್​ಡೇ ಎಂಬ ಹ್ಯಾಷ್ ಟ್ಯಾಗ್ ಜತೆಗೆ ಪಿಎಂ ಮೋದಿ, ಹ್ಯಾಪಿಬಿಡೇನಮೋ ಹ್ಯಾಷ್ ಟ್ಯಾಗ್​ಗಳನ್ನೂ ಬಳಸುತ್ತಿದ್ದಾರೆ.

- Advertisement -

Latest News

error: Content is protected !!