Saturday, June 13, 2026
Homeತಾಜಾ ಸುದ್ದಿಮಹಾರಾಷ್ಟ್ರ ಬಹುಅಂತಸ್ತಿನ ಕಟ್ಟಡ ಕುಸಿತ ಪ್ರಕರಣ: ಸಾವಿನ ಸಂಖ್ಯೆ 15 ಕ್ಕೆ ಏರಿಕೆ

ಮಹಾರಾಷ್ಟ್ರ ಬಹುಅಂತಸ್ತಿನ ಕಟ್ಟಡ ಕುಸಿತ ಪ್ರಕರಣ: ಸಾವಿನ ಸಂಖ್ಯೆ 15 ಕ್ಕೆ ಏರಿಕೆ

- Advertisement -
- Advertisement -

ಮುಂಬೈ: ಮಹಾರಾಷ್ಟ್ರದ ರಾಯಗಡ ಜಿಲ್ಲೆಯ ಮಹದ್ ನಲ್ಲಿ ಐದು ಅಂತಸ್ತಿನ ಕಟ್ಟಡ ಕುಸಿತ ಪ್ರಕರಣದಲ್ಲಿ 7 ಪುರುಷರು ಮತ್ತು 8 ಮಹಿಳೆಯರು ಸೇರಿ ಮೃತಪಟ್ಟವರ ಸಂಖ್ಯೆ 15ಕ್ಕೆಏರಿಕೆಯಾಗಿದೆ.

ಅಗ್ನಿಶಾಮಕ ದಳದ ಸಿಬ್ಬಂದಿಗಳು ರಕ್ಷಣಾ ಕಾರ್ಯಾಚಣೆ ನಡೆಸುತ್ತಿದ್ದು, ಗಾಯಗೊಂಡಿದ್ದ 18 ಮಂದಿಯನ್ನು ರಕ್ಷಣೆ ಮಾಡಿದ್ದಾರೆ. ಕಟ್ಟಡದ ಅವಶೇಷಗಳ ಅಡಿಯಲ್ಲಿ ಇನ್ನೂ ಒಬ್ಬರು ಸಿಲುಕಿಕೊಂಡಿರುವ ಶಂಕೆಗಳು ವ್ಯಕ್ತವಾಗಿದೆ.

ರಾಯಘಡ್ ಜಿಲ್ಲೆ ಮಹದ್ ಪ್ರದೇಶದಲ್ಲಿ ಐದು ಅಂತಸ್ತಿನ ಕಟ್ಟಡ ಕುಸಿದಿತ್ತು. ಈ ದುರಂತಕ್ಕೆ ಸಂಬಂಧಿಸಿದಂತೆ ಈವರೆಗೂ ಐವರು ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 304ರ ಅಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Latest News

error: Content is protected !!