Friday, June 5, 2026
Homeಕರಾವಳಿಉಡುಪಿಬ್ರಹ್ಮಾವರ: ಹಳಿ ದಾಟುವಾಗ ರೈಲು ಡಿಕ್ಕಿ: ಸ್ಥಳದಲ್ಲೇ ವ್ಯಕ್ತಿ ಸಾವು

ಬ್ರಹ್ಮಾವರ: ಹಳಿ ದಾಟುವಾಗ ರೈಲು ಡಿಕ್ಕಿ: ಸ್ಥಳದಲ್ಲೇ ವ್ಯಕ್ತಿ ಸಾವು

- Advertisement -
- Advertisement -

ಬ್ರಹ್ಮಾವರ : ಬ್ರಹ್ಮಾವರದ ಚಾಂತಾರು ಎಂಬಲ್ಲಿ ರೈಲು ಢಿಕ್ಕಿಯಾಗಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಸಂಭವಿಸಿದೆ. ಮೃತ ವ್ಯಕ್ತಿಯನ್ನು ಹೇರೂರು ಗ್ರಾಮದ ಸೋಮ ನಾಯ್ಕ ಎಂದು ಗುರುತಿಸಲಾಗಿದೆ..

ಸೋಮ ನಾಯ್ಕ (55) ಅವರು ಮೇ.15 ರಂದು ಬೆಳಿಗ್ಗೆ ಕೆಲಸಕ್ಕೆಂದು ಹೋಗಿದ್ದರು. ಸಂಜೆ ವೇಳೆ ಬ್ರಹ್ಮಾವರದ ಚಾಂತಾರು ರೈಲು ಹಳಿ ಬಳಿ ಇರುವ ತಮ್ಮ ದೈವದ ಮನೆಗೆ ಹೋಗಲು ರೈಲ್ವೇ ಟ್ರಾಕ್ ನ್ನು ದಾಟುತ್ತಿದ್ದಾಗ ಉಡುಪಿ ಕಡೆಯಿಂದ ಕುಂದಾಪುರ ಕಡೆಗೆ ಹಾದು ಹೋಗುವ ಮತ್ತ್ವಗಂಧ ಎಕ್ಸ್ ಪ್ರೆಸ್ ರೈಲು ಡಿಕ್ಕಿಯಾಗಿ ಕೆಲವು ದೂರ ಎಸೆಯಲ್ಪಟ್ಟು ತೀವ್ರ ಗಾಯಗೊಂಡು ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಬಗ್ಗೆ ಮೃತರ ಮಗ ಪ್ರದೀಪ ನಾಯ್ಕ ಎಂಬುವರು ನೀಡಿದ ಮಾಹಿತಿಯಂತೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!