Saturday, August 29, 2026
Homeಕರಾವಳಿಮಂಗಳೂರುಮಂಗಳೂರು ಸೆಂಟ್ರಲ್ ರೈಲ್ವೇ ನಿಲ್ದಾಣಕ್ಕೆ ಕೇಂದ್ರ ಸಚಿವ ವಿ. ಸೋಮಣ್ಣ ಭೇಟಿ

ಮಂಗಳೂರು ಸೆಂಟ್ರಲ್ ರೈಲ್ವೇ ನಿಲ್ದಾಣಕ್ಕೆ ಕೇಂದ್ರ ಸಚಿವ ವಿ. ಸೋಮಣ್ಣ ಭೇಟಿ

- Advertisement -
- Advertisement -

ಮಂಗಳೂರು: ಕೇಂದ್ರ ರೈಲ್ವೇ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಮಂಗಳೂರಿನ ಸೆಂಟ್ರಲ್ ರೈಲ್ವೇ ನಿಲ್ದಾಣಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು‌.

ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಡಿ. ವೇದವ್ಯಾಸ ಕಾಮತ್ ಮತ್ತು ಹರೀಶ್ ಪೂಂಜ ಭೇಟಿ ವೇಳೆ ಉಪಸ್ಥಿತರಿದ್ದರು.

ರೈಲ್ವೇ ನಿಲ್ದಾಣದಲ್ಲಿ ಪರಿಶೀಲನೆ ನಡೆಸಿದ ಸಚಿವ ಸೋಮಣ್ಣ, ಫ್ಲ್ಯಾಟ್ ಫಾರಂ, ವಿಶ್ರಾಂತಿ ಕೊಠಡಿ ಮತ್ತು ಕ್ಯಾಂಟೀನ್ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು‌.

ರೈಲ್ವೇ ಇಲಾಖೆಯ ಹಿರಿಯ ಅಧಿಕಾರಿಗಳು ಈ ವೇಳೆ ಉಪಸ್ಥಿತರಿದ್ದು ಕೇಂದ್ರ ಸಚಿವರಿಗೆ ಮಾಹಿತಿ ನೀಡಿದರು‌.ಇದೇ ವೇಳೆ ಮಾಜಿ ಸಂಸದ ನಳೀನ್ ಕುಮಾರ್ ಕಟೀಲ್ ಅವರ ನಿವಾಸಕ್ಕೂ ಸಚಿವ ಸೋಮಣ್ಣ ಭೇಟಿ ನೀಡಿದ್ದರು.

- Advertisement -

Latest News

error: Content is protected !!