Thursday, May 16, 2024
Homeಕರಾವಳಿಚಂಡಮಾರುತ ಎಫೆಕ್ಟ್': ರಾಜ್ಯದ ಜನತೆಗೆ ಭಾರಿ 'ಮಳೆ' ಮುನ್ನೆಚ್ಚರಿಕೆ ನೀಡಿದ 'ಹವಾಮಾನ ಇಲಾಖೆ'

ಚಂಡಮಾರುತ ಎಫೆಕ್ಟ್’: ರಾಜ್ಯದ ಜನತೆಗೆ ಭಾರಿ ‘ಮಳೆ’ ಮುನ್ನೆಚ್ಚರಿಕೆ ನೀಡಿದ ‘ಹವಾಮಾನ ಇಲಾಖೆ’

spot_img
- Advertisement -
- Advertisement -

ಬೆಂಗಳೂರು: ದಕ್ಷಿಣ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಸಂಭವಿಸಲಿದ್ದು, ತಮಿಳುನಾಡು, ಆಂಧ್ರಪ್ರದೇಶ, ಶ್ರೀಲಂಕಾ ಹಾಗೂ ಕರ್ನಾಟಕದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಬಂಗಾಳ ಉಪಸಾಗರ ನೈರುತ್ಯ ಭಾಗದಲ್ಲಿ ವಾಯುಭಾರ ಕುಸಿತದಿಂದ ಮುಂದಿನ 24 ಗಂಟೆಯೊಳಗೆ ನಿವಾರ್​ ಚಂಡ ಮಾರುತ ಅಪ್ಪಳಿಸಲಿದೆ. ಇದರ ಪರಿಣಾಮ ರಾಜ್ಯದ ಹಲವು ಭಾಗಗಳಲ್ಲಿ ಬುಧವಾರ ಅಂದರೆ, ನ.25ರಿಂದ ಎರಡು ದಿನಗಳ ಕಾಲ ಭಾರೀ ಮಳೆಯಾಗುವ ಸೂಚನೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆಯ ನಿರ್ದೇಶಕ ಸಿ ಎಸ್ ಪಾಟೀಲ್ ತಿಳಿಸಿದ್ದಾರೆ.

‘ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಎರಡೂ ದಿನ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ’ ಎಂದು ಮಾಹಿತಿ ನೀಡಿದರು. ಇನ್ನು ಕರಾವಳಿಯ ಕೆಲವು ಭಾಗಗಳಿಗೆ ಬುಧವಾರ ಮುಂಜಾನೆ 6 ಗಂಟೆ ಸುಮಾರಿಗೆ ಚಂಡ ಮಾರುತ ಅಬ್ಬರಿಸಲಿದೆ ಎಂದಿದ್ದಾರೆ.

- Advertisement -
spot_img

Latest News

error: Content is protected !!