Wednesday, June 3, 2026
Homeಕರಾವಳಿಬಂಟ್ವಾಳ ತಾಲೂಕಿನಲ್ಲಿ ನಿನ್ನೆ ರಾತ್ರಿಯಿಡಿ ಸುರಿದ ಮಳೆಗೆ ಹಲವೆಡೆ ಹಾನಿ

ಬಂಟ್ವಾಳ ತಾಲೂಕಿನಲ್ಲಿ ನಿನ್ನೆ ರಾತ್ರಿಯಿಡಿ ಸುರಿದ ಮಳೆಗೆ ಹಲವೆಡೆ ಹಾನಿ

- Advertisement -
- Advertisement -

ಬಂಟ್ವಾಳ ತಾಲೂಕಿನಲ್ಲಿ ನಿನ್ನೆ  ರಾತ್ರಿಯಿಡಿ ಸುರಿದ ಧಾರಾಕಾರ ಮಳೆಗೆ ಅಲ್ಲಲ್ಲಿ ಹಾನಿ ಉಂಟಾಗಿದೆ. ಮಾಣಿ- ಮೈಸೂರು ರಾಷ್ಟ್ರೀಯ ಹೆದ್ದಾರಿ- ನೇರಳಕಟ್ಟೆ ಎಂಬಲ್ಲಿ ರಸ್ತೆಗೆ ಮರ ಬಿದ್ದು ವಾಹನ ಸಂಚಾರಕ್ಕೆ ಕೆಲ ಹೊತ್ತು ಅಡ್ಡಿಯಾಗಿತ್ತು. ಅರಣ್ಯ ಇಲಾಖೆ ಹಾಗೂ ಮೆಸ್ಕಾಂ ಇಲಾಖೆ ಸಿಬ್ಬಂದಿ ತೆರವು ಕಾರ್ಯ ನಡೆಸಿ ಸಂಚಾರಕ್ಕೆ ಮುಕ್ತಗೊಳಿಸಿದ್ರು.

ನೆಟ್ಲ ಮುಡ್ನೂರು ಗ್ರಾಮದ ಏಮಾಜೆ ಎಂಬಲ್ಲಿ ಬಾಬು ಗೌಡರವರ ಪತ್ನಿ ಹೊನ್ನಮ್ಮ ಅವರವ ಕೊಟ್ಟಿಗೆಗೆ ಹಾನಿಯಾಗಿದೆ. ಸ್ಥಳಕ್ಕೆ ಅಧಿಕಾರಿಗಳು ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಇನ್ನೂ ತಾಲೂಕಿನಲ್ಲಿ ಅನೇಕ ಕಡೆಗಳಲ್ಲಿ ಹಾನಿಯಾಗಿದೆ.

- Advertisement -

Latest News

error: Content is protected !!