Friday, June 5, 2026
Homeಕರಾವಳಿಉಡುಪಿಕರಾವಳಿಯಲ್ಲಿ ಮುಂದಿನ 48 ಗಂಟೆಗಳಲ್ಲಿ ಆಲಿಕಲ್ಲು ಸಹಿತ ಭಾರೀ ಮಳೆಯಾಗುವ ಸಾಧ್ಯತೆ; ಹವಾಮಾನ ಇಲಾಖೆ ಮುನ್ಸೂಚನೆ

ಕರಾವಳಿಯಲ್ಲಿ ಮುಂದಿನ 48 ಗಂಟೆಗಳಲ್ಲಿ ಆಲಿಕಲ್ಲು ಸಹಿತ ಭಾರೀ ಮಳೆಯಾಗುವ ಸಾಧ್ಯತೆ; ಹವಾಮಾನ ಇಲಾಖೆ ಮುನ್ಸೂಚನೆ

- Advertisement -
- Advertisement -

ಬೆಂಗಳೂರು: ಮಾರ್ಚ್ 21ರಿಂದ ಮತ್ತೆ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಆಲಿಕಲ್ಲು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂಬುದಾಗಿ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಈ ಬಗ್ಗೆ ಮಾಹಿತಿ ನೀಡಿರುವಂತ ಹವಾಮಾನ ಇಲಾಖೆಯು, ಮೇಲ್ಮೈ ಸುಳಿಗಾಳಿಯ ಪರಿಣಾಮದಿಂದಾಗಿ ರಾಜ್ಯದ ಕೊಡಗು, ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು, ಚಿಕ್ಕಬಳ್ಳಾಪುರ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ತುಮಕೂರು, ಉಡುಪಿ, ಬೀದರ್, ಬೆಳಗಾವಿ, ಬಾಗಲಕೋಟೆ, ಯಾದಗಿರಿ ಹಾಗೂ ಕಲಬುರ್ಗಿ ಜಿಲ್ಲೆಯಲ್ಲಿ ಮುಂದಿನ 2 ದಿನ ಗುಡುಗು ಸಹಿತ ಆಲಿಕಲ್ಲು ಮಳೆಯಾಗಲಿದೆ ಎಂಬುದಾಗಿ ಮುನ್ಸೂಚನೆ ನೀಡಿದೆ.

ಅಂದಹಾಗೆ ಕಳೆದ ಭಾನುವಾರದಂದು ಮೈಸೂರಿನ ಹುಣಸೂರು, ತುಮಕೂರಿನ ಚಿಕ್ಕನಾಯಕನಹಳ್ಳಿ, ಉಡುಪಿಯ ಬ್ರಹ್ಮಾವರ, ಬಳ್ಳಾರಿಯ ಹಗರಿಬೊಮ್ಮನಹಳ್ಳಿ, ಚಾಮರಾಜನಗರದ ಹರದಹಳ್ಳಿ ಹಾಗೂ ವಿವಿಧೆಡೆ ಆಲಿಕಲ್ಲು ಸಹಿತ ಮಳೆಯಾಗಿತ್ತು. ಆಲಿಕಲ್ಲಿನ ಬೆಳ್ಳನೆಯ ರಾಶಿ ಕಂಡ ಜನರು ಕರ್ನಾಟಕ ಹಿಮಾಲಯವಾಗಿದೆ ಎಂಬುದಾಗಿ ಅಚ್ಚರಿಗೊಂಡಿದ್ದರು. ಈ ಬೆನ್ನಲ್ಲೆ ಮಾರ್ಚ್ 21ರಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮತ್ತೆ ಆಲಿಕಲ್ಲು ಸಹಿತ ಮಳೆಯಾಗುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

- Advertisement -

Latest News

error: Content is protected !!