Friday, October 16, 2026
Homeಕರಾವಳಿಕರಾವಳಿಯಲ್ಲಿ ಮುಂದಿನ 3-4 ದಿನಗಳ ಕಾಲ ಮಳೆ ಸಾಧ್ಯತೆ

ಕರಾವಳಿಯಲ್ಲಿ ಮುಂದಿನ 3-4 ದಿನಗಳ ಕಾಲ ಮಳೆ ಸಾಧ್ಯತೆ

- Advertisement -
- Advertisement -

ಮಂಗಳೂರು: ದಕ್ಷಿಣ ಕನ್ನಡ, ಕಾಸರಗೋಡು, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂದಿನ 3-4 ದಿನಗಳ ಕಾಲ ಸಂಜೆ ಮತ್ತು ರಾತ್ರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಅರಬ್ಬೀ ಸಮುದ್ರ ಮತ್ತು ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿಯ ಪರಿಣಾಮವಾಗಿ ಅಕ್ಟೋಬರ್ 15ರಿಂದ ದಕ್ಷಿಣ ಕರ್ನಾಟಕದಲ್ಲಿ ಹಿಂಗಾರು ಮಳೆ ಚುರುಕುಗೊಂಡಿದೆ.

ಮುಂದಿನ 3-4 ದಿನಗಳ ಕಾಲ ಕರಾವಳಿ ಭಾಗದಲ್ಲಿ ಸಂಜೆ ಮತ್ತು ರಾತ್ರಿ ಮಳೆ ಮುಂದುವರಿಯುವ ನಿರೀಕ್ಷೆಯಿದೆ. ಮಲೆನಾಡಿನ ಶಿವಮೊಗ್ಗ ಜಿಲ್ಲೆಯಲ್ಲಿ ಇಂದಿನಿಂದ ಮಳೆ ಆರಂಭವಾಗುವ ಸಾಧ್ಯತೆಯಿದ್ದು, ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಹಗಲಿನಲ್ಲಿ ಮೋಡ ಕವಿದ ವಾತಾವರಣದೊಂದಿಗೆ ಸಂಜೆ ಮತ್ತು ರಾತ್ರಿ ಗುಡುಗು ಸಹಿತ ಮಳೆಯಾಗಬಹುದು.

ಕೊಡಗು ಜಿಲ್ಲೆ ಸೇರಿದಂತೆ ಚಾರ್ಮಾಡಿ, ಕುದುರೆಮುಖ ಹಾಗೂ ಆಗುಂಬೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ವರದಿ ತಿಳಿಸಿದೆ.

- Advertisement -

Latest News

error: Content is protected !!