Wednesday, April 16, 2025
Homeಕರಾವಳಿಮಂಗಳೂರುಮಾರ್ಚ್ 22 ರಿಂದ ನಾಲ್ಕು ದಿನಗಳ ಕಾಲ ಕರಾವಳಿ ಸೇರಿದಂತೆ ರಾಜ್ಯದ ವಿವಿಧೆಡೆ ಮಳೆ ಸಾಧ್ಯತೆ

ಮಾರ್ಚ್ 22 ರಿಂದ ನಾಲ್ಕು ದಿನಗಳ ಕಾಲ ಕರಾವಳಿ ಸೇರಿದಂತೆ ರಾಜ್ಯದ ವಿವಿಧೆಡೆ ಮಳೆ ಸಾಧ್ಯತೆ

spot_img
- Advertisement -
- Advertisement -

ಬೆಂಗಳೂರು: ಮಾರ್ಚ್ 22 ರಿಂದ ನಾಲ್ಕು ದಿನಗಳ ಕಾಲ ಕರಾವಳಿ ಸೇರಿದಂತೆ ರಾಜ್ಯದ ವಿವಿಧೆಡೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.


ದಕ್ಷಿಣ ಕನ್ನಡ, ಚಿಕ್ಕಮಗಳೂರು, ಮೈಸೂರು, ಕೊಡಗು, ಹಾಸನ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ ಮತ್ತು ಮಂಡ್ಯ ಜಿಲ್ಲೆಯ ಪ್ರತ್ಯೇಕ ಸ್ಥಳಗಳಲ್ಲಿ ಮಾರ್ಚ್ 22 ರಂದು ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೀದರ್, ಕಲಬುರಗಿ, ಯಾದಗಿರಿ, ವಿಜಯಪುರ ಮತ್ತು ರಾಯಚೂರು ಜಿಲ್ಲೆಯ ಪ್ರತ್ಯೇಕ ಸ್ಥಳಗಳಲ್ಲಿ ತುಂತುರು ಮಳೆಯಾಗುವ ಸಂಭವವಿದೆ. ಕೆಲ ಸ್ಥಳಗಳಲ್ಲಿ 30 ರಿಂದ 40 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

23, 24 ಮತ್ತು 25 ರಂದು ಕೂಡ ರಾಜ್ಯದ ವಿವಿಧೆಡೆ ಮಳೆಯಾಗುವ ಸಾಧ್ಯತೆಯಿದೆ. ಮುಂದಿನ ಐದು ದಿನಗಳು ಗರಿಷ್ಠ ಉಷ್ಣಾಂಶದಲ್ಲಿ ದೊಡ್ಡ ಬದಲಾವಣೆಯಿಲ್ಲ ಎಂದು ತಿಳಿಸಿದೆ.

- Advertisement -
spot_img

Latest News

error: Content is protected !!