Friday, March 29, 2024
Homeತಾಜಾ ಸುದ್ದಿಜೂನ್ 5 ರಿಂದ ರಾಜ್ಯದಲ್ಲಿ ಮುಂಗಾರು ಮಳೆ ಆರಂಭ

ಜೂನ್ 5 ರಿಂದ ರಾಜ್ಯದಲ್ಲಿ ಮುಂಗಾರು ಮಳೆ ಆರಂಭ

spot_img
- Advertisement -
- Advertisement -

ಬೆಂಗಳೂರು : ಇನ್ನೆರಡು ದಿನಗಳಲ್ಲಿ ಕೇರಳಕ್ಕೆ ಮುಂಗಾರು ಪ್ರವೇಶವಾಗಲಿದ್ದು, ಬಳಿಕ ಜೂನ್ 5 ರಿಂದ ರಾಜ್ಯದಲ್ಲಿ ಮುಂಗಾರು ಮಳೆ ಆರಂಭವಾಗಲಿದೆ. ಮುಂದಿನ 48 ಗಂಟೆಗಳಲ್ಲಿ ದಕ್ಷಿಣ ಅರೇಬಿಯನ್ ಸಮುದ್ರದ ಕೆಲವು ಭಾಗಗಳು ಮತ್ತು ಇಡೀ ಮಾಲ್ಡೀವ್ಸ್ ಮತ್ತು ಲಕ್ಷದ್ವೀಪದ ಪಕ್ಕದ ಪ್ರದೇಶಗಳು ಹಾಗೂ ಕೊಮೊರಿನ್​ನ ಕೆಲವೆಡೆ ನೈಋತ್ಯ ಮುಂಗಾರು ಮತ್ತಷ್ಟು ಪ್ರವೇಶ ಪಡೆಯುವ ನಿರೀಕ್ಷೆ ಇದೆ. ಅದೇ ರೀತಿಯಾಗಿ ಈ ವಾರದಲ್ಲಿ ಕೇರಳದಲ್ಲಿ ಮಾನ್ಸೂನ್ ಆರಂಭವಾಗಲು ಪೂರಕವಾದ ವಾತಾವರಣವಿದೆ ಎಂದು ಹೇಳಿದೆ.

ಅಸನಿ ಚಂಡಮಾರುತದ ಪ್ರಭಾವದಿಂದಾಗಿ ಈ ಬಾರಿ ವಾಡಿಕೆಗಿಂತ ಮೊದಲೇ ಅಂದರೆ ಮೇ 16ಕ್ಕೆ ಅಂಡಮಾನ್ ಅನ್ನು ಮುಂಗಾರು ತಲುಪಿತ್ತು. ಆದರೆ, ಆರು ದಿನಗಳ ವಿರಾಮದ ಬಳಿಕ ಈಗ ಶ್ರೀಲಂಕಾದಿಂದ ಕೇರಳದ ಕಡೆಗೆ ಚಲಿಸಲು ಪ್ರಾರಂಭಿಸಿದೆ. ಕೇರಳಕ್ಕೆ ಆಗಮಿಸುವುದು ಮಾತ್ರವೇ ಬಾಕಿ ಇದೆ ಎನ್ನಲಾಗಿದೆ. ಮಾನ್ಸೂನ್ ಜೂನ್ 1 ರಂದು ಕೇರಳ ರಾಜ್ಯವನ್ನು ಪ್ರವೇಸಿಸಿದರೆ, ಜೂನ್ 5 ರಂದು ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳನಾಡಿನ ಕೆಲ ಭಾಗಗಳನ್ನು ಮುಟ್ಟಲಿದೆ. ಜೂನ್ 10 ರ ವೇಳೆಗೆ ಅದು ಇಡೀ ರಾಜ್ಯವನ್ನು ಆವರಿಸುತ್ತದೆ ಎಂದು ಹವಾಮಾನ ಇಲಾಖೆ ಬೆಂಗಳೂರು ಅಧಿಕಾರಿಗಳು ತಿಳಿಸಿದ್ದಾರೆ.

- Advertisement -
spot_img

Latest News

error: Content is protected !!