Saturday, June 6, 2026
Homeಕರಾವಳಿಉಡುಪಿದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಜುಲೈ 27ರವರೆಗೆ ಗಾಳಿ ಸಹಿತ ಮಳೆ; ಭಾರತೀಯ ಹವಾಮಾನ ಇಲಾಖೆಯಿಂದ ಎಚ್ಚರಿಕೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಜುಲೈ 27ರವರೆಗೆ ಗಾಳಿ ಸಹಿತ ಮಳೆ; ಭಾರತೀಯ ಹವಾಮಾನ ಇಲಾಖೆಯಿಂದ ಎಚ್ಚರಿಕೆ

- Advertisement -
- Advertisement -

ಮಂಗಳೂರು: ಅರಬ್ಬಿ ಸಮುದ್ರದಲ್ಲಿ ಹೆಚ್ಚಿನ ಗಾಳಿ ಬೀಸುವ ಸಾಧ್ಯತೆಯಿದ್ದು, ಈ ಕಾರಣದಿಂದ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಜುಲೈ 27ರವರೆಗೆ ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮತ್ತು ಬೆಂಗಳೂರಿನ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಎಚ್ಚರಿಕೆ ನೀಡಿದೆ.

ಇನ್ನು ನಿರಂತರವಾಗಿ ಸುಳಿಯುತ್ತಿರುವ ಮಳೆಯಿಂದಾಗಿ ಕೆಲವು ಪ್ರದೇಶಗಳಲ್ಲಿ ಭೂಕುಸಿತ ಸಂಭವಿಸುವ ಸಾಧ್ಯತೆಯಿದ್ದು, ಅಂತಹ ಪ್ರದೇಶಗಳ ನಿವಾಸಿಗಳು ಸ್ಥಳೀಯ ತಹಶೀಲ್ದಾರ್ ಅಥವಾ ಗ್ರಾಮ ಪಂಚಾಯತ್ ಅಧಿಕಾರಿಗಳನ್ನು ಸಂಪರ್ಕಿಸಿ ಹತ್ತಿರದ ಪರಿಹಾರ ಕೇಂದ್ರಗಳಲ್ಲಿ ಮುಂಚಿತವಾಗಿ ಆಶ್ರಯ ಪಡೆಯುವಂತೆ ತಿಳಿಸಲಾಗಿದೆ.  

- Advertisement -

Latest News

error: Content is protected !!