Tuesday, April 30, 2024
Homeತಾಜಾ ಸುದ್ದಿಮಸೀದಿಗಳಲ್ಲಿ ಧ್ವನಿವರ್ಧಕ ತೆಗೆಯದಿದ್ರೆ ಹನುಮಾನ್ ಚಾಲೀಸ ಹಾಡ್ತೀವಿ’: ರಾಜ್ ಠಾಕ್ರೆ ಎಚ್ಚರಿಕೆ

ಮಸೀದಿಗಳಲ್ಲಿ ಧ್ವನಿವರ್ಧಕ ತೆಗೆಯದಿದ್ರೆ ಹನುಮಾನ್ ಚಾಲೀಸ ಹಾಡ್ತೀವಿ’: ರಾಜ್ ಠಾಕ್ರೆ ಎಚ್ಚರಿಕೆ

spot_img
- Advertisement -
- Advertisement -

ಮುಂಬೈ: ಮಸೀದಿಯ ಧ್ವನಿವರ್ಧಕಗಳನ್ನು ತೆಗೆದು ಹಾಕುವಂತೆ ರಾಜ್ಯ ಸರ್ಕಾರವನ್ನು ಮಹಾರಾಷ್ಟ್ರ ನವನಿರ್ಮಾಣ ಸೇನಾ ಮುಖ್ಯಸ್ಥ ರಾಜ್ ಠಾಕ್ರೆ ಒತ್ತಾಯಿಸಿದ್ದಾರೆ. ಇಲ್ಲದಿದ್ದರೆ, ಮಸೀದಿ ಮುಂದೆ ದೊಡ್ಡ ಶಬ್ದದಲ್ಲಿ ಹನುಮಾನ್ ಚಾಲಿಸಾ ನುಡಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.


ಪಕ್ಷದ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಠಾಕ್ರೆ, ‘ನಾನು ಯಾವುದೇ ಪ್ರಾರ್ಥನೆಗಳ ವಿರೋಧಿ ಅಲ್ಲ. ನೀವು ನಿಮ್ಮ ಮನೆಯಲ್ಲಿ ಪ್ರಾರ್ಥನೆಗಳನ್ನು ಮಾಡಬಹುದು. ಆದರೆ, ಮಸೀದಿಯ ಧ್ವನಿವರ್ಧಕಗಳನ್ನು ತೆಗೆಸುವಲ್ಲಿ ಸರ್ಕಾರ ಕ್ರಮ ತೆಗೆದುಕೊಳ್ಳಬೇಕು.


”ಮುಸ್ಲಿಂ ಗುಡಿಸಲುಗಳಲ್ಲಿರುವ ಮದರಸಾಗಳ ಮೇಲೆ ದಾಳಿ ಮಾಡುವಂತೆ ನಾನು ಪ್ರಧಾನಿ ಮೋದಿಗೆ ಮನವಿ ಮಾಡುತ್ತೇನೆ. ಪಾಕಿಸ್ತಾನಿ ಬೆಂಬಲಿಗರು ಈ ಗುಡಿಸಲುಗಳಲ್ಲಿ ನೆಲೆಸಿದ್ದಾರೆ. ಮುಂಬೈ ಪೊಲೀಸರಿಗೆ ಅಲ್ಲಿ ಏನು ನಡೆಯುತ್ತಿದೆ. ಎಂದು ತಿಳಿದಿದೆ. ನಮ್ಮ ಶಾಸಕರು ಅವರನ್ನು ಮತ ಬ್ಯಾಂಕ್‌ಗಾಗಿ ಬಳಸುತ್ತಿದ್ದಾರೆ, ಅಂತಹವರಿಗೆ ಆಧಾರ್ ಕಾರ್ಡ್ ಕೂಡ ಇಲ್ಲ” ಎಂದು ಅವರು ಆರೋಪಿಸಿದ್ದಾರೆ.
 


ಉತ್ತರ ಪ್ರದೇಶ ಸಿಎಂ ಆದಿತ್ಯನಾಥ್ ಸರ್ಕಾರವನ್ನು ಶ್ಲಾಘಿಸಿದ ಠಾಕ್ರೆ, ಉತ್ತರ ಪ್ರದೇಶವು ಪ್ರಗತಿಯಲ್ಲಿದೆ ಮತ್ತು ಮಹಾರಾಷ್ಟ್ರದಲ್ಲಿ ಅದೇ ಅಭಿವೃದ್ಧಿಯನ್ನು ತಾವು ಬಯಸುವುದಾಗಿ ಹೇಳಿದ್ದಾರೆ. ಉತ್ತರ ಪ್ರದೇಶ ಪ್ರಗತಿಯಾಗುತ್ತಿರುವುದನ್ನು ಕಂಡು ಸಂತೋಷವಾಗುತ್ತಿದೆ. ಮಹಾರಾಷ್ಟ್ರದಲ್ಲೂ ಅದೇ ಅಭಿವೃದ್ಧಿಯನ್ನು ಬಯಸುತ್ತೇವೆ. ನಾನು ಶೀಘ್ರವೇ ಅಯೋಧ್ಯೆಗೆ ಭೇಟಿ ನೀಡುತ್ತೇನೆ. ಆದರೆ ಯಾವಾಗ ಎಂದು ಇಂದು ಹೇಳುವುದಿಲ್ಲ. ಹಿಂದುತ್ವದ ಬಗ್ಗೆಯೂ ಮಾತನಾಡುತ್ತೇನೆ ಎಂದು ಅವರು ಹೇಳಿದ್ದಾರೆ.

- Advertisement -
spot_img

Latest News

error: Content is protected !!