Saturday, June 13, 2026
Homeಕರಾವಳಿರಾಜಕೇಸರಿ ಸಂಘಟನೆ : ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

ರಾಜಕೇಸರಿ ಸಂಘಟನೆ : ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

- Advertisement -
- Advertisement -

ಬೆಳ್ತಂಗಡಿ : ಕಳೆದ ಹಲವಾರು ವರುಷಗಳಿಂದ ಸಮಾಜಮುಖಿ ಸೇವೆಯಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿರುವ ರಾಜ ಕೇಸರಿ ಸಂಘಟನೆಯ ಬೆಳ್ತಂಗಡಿ ತಾಲೂಕು ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಸಂಸ್ಥಾಪಕ ದೀಪಕ್ ಜಿ ಅವರ ನೇತೃತ್ವದಲ್ಲಿ ನಡೆಯಿತು.
ಬೆಳ್ತಂಗಡಿ ತಾಲೂಕು ರಾಜ ಕೇಸರಿ (ರಿ) ಇದರ ನೂತನ ಅಧ್ಯಕ್ಷರಾಗಿ ಕಾರ್ತಿಕ್ ಉಜಿರೆ ,ಸಂಚಾಲಕರಾಗಿ ಪ್ರವೀಣ್ ಕುಲಾಲ್ ,ಕಾರ್ಯದರ್ಶಿಯಾಗಿ ಅನಿಲ್, ಕೋಶಾಧಿಕಾರಿಯಾಗಿ ಸಂತೋಷ್ ಆಯ್ಕೆಯಾಗಿದ್ದಾರೆ.

ಈ ಸಂದರ್ಭದಲ್ಲಿ ಬೆಳ್ತಂಗಡಿ ತಾಲೂಕು ರಾಜ ಕೇಸರಿ ಸಂಘಟನೆ (ರಿ) ಇದರ ವತಿಯಿಂದ ಉಪ್ಪಿನಂಗಡಿ ಖಾಸಗಿ ಬಸ್ ನಿಲ್ದಾಣಕ್ಕೆ ಗಡಿಯಾರವನ್ನು ಹಸ್ತಾಂತರಿಸಲಾಯಿತು. ರಾಜ ಕೇಸರಿ ಸಂಘಟನೆಯ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಹಾಜರಾಗಿದ್ದರು

- Advertisement -

Latest News

error: Content is protected !!