Saturday, May 18, 2024
Homeತಾಜಾ ಸುದ್ದಿರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ಡಾ.ರಜನೀಶ್ ಗೋಯಲ್ ನೇಮಕ

ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ಡಾ.ರಜನೀಶ್ ಗೋಯಲ್ ನೇಮಕ

spot_img
- Advertisement -
- Advertisement -

ಬೆಂಗಳೂರು: ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ಡಾ.ರಜನೀಶ್ ಗೋಯಲ್ ನೇಮಕವಾಗಿದ್ದಾರೆ, ಹಾಲಿ ಕಾರ್ಯದರ್ಶಿ ವಂದಿತಾ ಶರ್ಮಾ ಅವರ ಅವಧಿ ನ.30ಕ್ಕೆ ಮುಕ್ತಾಯಗೊಳ್ಳುತ್ತಿದೆ. ಈ ಹಿನ್ನಲೆಯಲ್ಲಿ ನೂತನ ಮುಖ್ಯ ಕಾರ್ಯದರ್ಶಿಯಾಗಿ ಡಾ.ರಜನೀಶ್ ಗೋಯಲ್ ಅವರನ್ನು ನೇಮಕ ಮಾಡಲಾಗಿದೆ.

ಈ ಕುರಿತಂತೆ ರಾಜ್ಯ ಸರ್ಕಾರದಿಂದ ಅಧಿಸೂಚನೆ ಹೊರಡಿಸಲಾಗಿದ್ದು, 1986ನೇ ಸಾಲಿನ ಕರ್ನಾಟಕ ಕೇಡರ್ ಐಎಎಸ್ ಅಧಿಕಾರಿ ಡಾ.ರಜನೀಶ್ ಗೋಯಲ್ ಅವರನ್ನು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ನೇಮಕ ಮಾಡಿ ಆದೇಶಿಸಲಾಗಿದೆ ಎಂದು ತಿಳಿಸಿದೆ.

ಅಂದಹಾಗೇ ದಿನಾಂಕ 30-11-2023ರಂದು ಸಿಎಸ್ ವಂದಿತಾ ಶರ್ಮಾ ಅವರು ನಿವೃತ್ತರಾಗಲಿದ್ದಾರೆ. ಅವರ ಸ್ಥಾನಕ್ಕೆ ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿದ್ದಂತ ಡಾ.ರಜನೀಶ್ ಗೋಯಲ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ.

- Advertisement -
spot_img

Latest News

error: Content is protected !!