- Advertisement -
![]()
- Advertisement -
ಬೆಂಗಳೂರು: ಕೆ.ಎನ್.ರಾಜಣ್ಣ ಅವರನ್ನು ಸಂಪುಟದಿಂದ ವಜಾಗೊಳಿಸಿದ ಬಗ್ಗೆ ವಿಧಾನಸಭೆ ಕಲಾಪದ ಎರಡನೇ ದಿನವಾದ ಇಂದು ಬಿಜೆಪಿ ನಾಯಕರು ಕಾಂಗ್ರೆಸ್ ನಾಯಕರಿಗೆ ಪ್ರಶ್ನೆಗಳ ಸುರಿಮಳೆ ಗೈದಿದ್ದಾರೆ.
ವಿಪಕ್ಷ ನಾಯಕ ಆರ್.ಅಶೋಕ್ ಅವರು ಸದನದಲ್ಲಿ ಮಾತನಾಡಿ, ಯಾವ ಕಾರಣಕ್ಕೆ ರಾಜಣ್ಣ ಅವರನ್ನು ವಜಾ ಮಾಡಲಾಗಿದೆ? ಈ ಬಗ್ಗೆ ಇಂದೇ ಉತ್ತರ ಕೊಡಿ. ಇದರ ಹಿಂದೆ ಒಂದು ಷಡ್ಯಂತ್ರ ಇದೆ. ಪಿತೂರಿಯೂ ಇದೆ ಎಂದು ಗುಡುಗಿದರು.
ಶಾಸಕ ಸುನೀಲ್ ಕುಮಾರ್ ಮಾತನಾಡಿ, ಆ ಪಿತೂರಿ, ಷಡ್ಯಂತ್ರ ಮಾಡಿದವರು ಯಾರು ಎಂದು ಹೇಳಿ ಎಂದು ಆಡಳಿತ ಪಕ್ಷದ ನಾಯಕರಿಗೆ ಆಗ್ರಹಿಸಿದರು.
- Advertisement -


