Saturday, August 29, 2026
Homeಕರಾವಳಿಬಂಟ್ವಾಳ: ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯ ರಸ್ತೆ ಅಭಿವೃದ್ಧಿ ಮತ್ತು ಸೇತುವೆ ಉದ್ಘಾಟಿಸಿದ ಶಾಸಕ ರಾಜೇಶ್...

ಬಂಟ್ವಾಳ: ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯ ರಸ್ತೆ ಅಭಿವೃದ್ಧಿ ಮತ್ತು ಸೇತುವೆ ಉದ್ಘಾಟಿಸಿದ ಶಾಸಕ ರಾಜೇಶ್ ನಾಯ್ಕ್

- Advertisement -
- Advertisement -

ಬಂಟ್ವಾಳ ತಾಲೂಕಿನ ಕನ್ಯಾನ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸುಮಾರು 8.10 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣಗೊಂಡ ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯ ರಸ್ತೆ ಅಭಿವೃದ್ಧಿ ಮತ್ತು ಸೇತುವೆ ನಿರ್ಮಾಣವನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ಭಾನುವಾರ ಉದ್ಘಾಟಿಸಿದರು.

ಈ ಸಂದರ್ಭ ಮಾತನಾಡಿದ ಅವರು, ರಸ್ತೆಗಳ ಅಭಿವೃದ್ಧಿಗೆ ತನ್ನ ಅವಧಿಯಲ್ಲಿ ಹೆಚ್ಚು ಒತ್ತು ನೀಡಿದ್ದು, ಬಂಟ್ವಾಳ ಕ್ಷೇತ್ರದಾದ್ಯಂತ ಸಾವಿರದೈನೂರಕ್ಕೂ ಅಧಿಕ ಸಂಪರ್ಕ ರಸ್ತೆಗಳಾಗಿವೆ. ಗ್ರಾಮೀಣ ಪ್ರದೇಶದ ರಸ್ತೆಗಳಿಗೆ ವಿಶೇಷ ಆದ್ಯತೆ ನೀಡಲಾಗಿದೆ ಎಂದರು. 8.10 ಕೋಟಿ ರೂ. ವೆಚ್ಚದಲ್ಲಿ ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯಲ್ಲಿ ನಿರ್ಮಾಣಗೊಂಡ ಬಾಳೆಕೋಡಿ ಪಿಲಿಂಗುಲಿ, ಅಕ್ಕರೆಕೋಡಿ ಬೆರಿಪದವು ರಸ್ತೆ ಅಭಿವೃದ್ಧಿ ಮತ್ತು ಸೇತುವೆ ನಿರ್ಮಾಣದಿಂದ ಸ್ಥಳೀಯರಿಗೆ ಪ್ರಯೋಜನವಾಗಲಿದೆ ಎಂದರು.

ಗ್ರಾಪಂ ಮಾಜಿ ಅಧ್ಯಕ್ಷ ಕೆ.ಪಿ.ರಘುರಾಮ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಬುಡಾ ಅಧ್ಯಕ್ಷ ದೇವದಾಸ ಶೆಟ್ಟಿ, ಬಿಜೆಪಿ ಕೊಳ್ನಾಡು ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಶಿವಪ್ರಸಾದ್ ಶೆಟ್ಟಿ ಅನೆಯಾಲಗುತ್ತು, ತಾಪಂ ಮಾಜಿ ಸದಸ್ಯರಾದ ಕುಮಾರ ಭಟ್ ಬದಿಕೋಡಿ, ಪಂಚಾಯಿತಿ ಸದಸ್ಯರಾದ ನಾರಾಯಣ ಗೌಡ, ವನಿತಾ ಪಿಲಿಂಗುಳಿ, ಉಪಾಧ್ಯಕ್ಷರಾದ ಕುಸುಮಾ, ಸ್ಥಳದಾನಿಗಳಾದ ಜಯರಾಮ ಶೆಟ್ಟಿ ಪಿಲಿಂಗುಳಿ ಉಪಸ್ಥಿತರಿದ್ದರು.

- Advertisement -

Latest News

error: Content is protected !!