Tuesday, June 23, 2026
Homeಕರಾವಳಿಪುತ್ತೂರು ಹಿಂದೂ ಕಾರ್ಯಕರ್ತರ ಮೇಲಿನ ಪೋಲೀಸ್ ದೌರ್ಜನ್ಯವನ್ನು ಖಂಡಿಸಿದ ಶಾಸಕ ರಾಜೇಶ್ ನಾಯ್ಕ್

ಪುತ್ತೂರು ಹಿಂದೂ ಕಾರ್ಯಕರ್ತರ ಮೇಲಿನ ಪೋಲೀಸ್ ದೌರ್ಜನ್ಯವನ್ನು ಖಂಡಿಸಿದ ಶಾಸಕ ರಾಜೇಶ್ ನಾಯ್ಕ್

- Advertisement -
- Advertisement -

ಪುತ್ತೂರಿನಲ್ಲಿ ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸರು ನಡೆಸಿದ ದೌರ್ಜನ್ಯವನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಖಂಡಿಸಿದ್ದಾರೆ.


ಅಲ್ಲದೇ ಕಾನೂನು ಮೀರಿ ಹಿಂದೂ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ ಘಟನೆಯ ಬಗ್ಗೆ ಸೂಕ್ತ ತನಿಖೆ ನಡೆಸಿ ಅವರ ಮೇಲೆ ಕ್ರಮ ಕೈಗೊಳ್ಳಲು ಒತ್ತಾಯಿಸಿದ್ದಾರೆ.ಈಗಾಗಲೇ ಯುವಕರ ಮೇಲೆ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇಲಾಧಿಕಾರಿಗಳು ಓರ್ವ ಎಸ್.ಐ.ಹಾಗೂ ಪೋಲೀಸ್ ನ್ನು ಸಸ್ಪೆಂಡ್ ಮಾಡಿದ್ದಾರೆ, ಆದರೆ ಕೇವಲ ಸಸ್ಪೆಂಡ್ ಮಾಡಿದರೆ ಸಾಲದು ಘಟನೆಯ ಬಗ್ಗೆ ಸೂಕ್ತ ತನಿಖೆ ನಡೆಸಿ ಅವರ ಮೇಲೆ ಕ್ರಮ ಕೈಗೊಳ್ಳಲು ಅವರು ಒತ್ತಾಯಿಸಿದ್ದಾರೆ.


ಇಂತಹ ಪೋಲೀಸ್ ದೌರ್ಜನ್ಯ ಘಟನೆಗಳು ನಡೆಯಬಾರದು ಎಂದು ತಿಳಿಸಿರುವ ಅವರು ಹಿಂದೂ ಕಾರ್ಯಕರ್ತರ ಜೊತೆಗೆ ಯಾವತ್ತು ನಾವಿದ್ದೇವೆ ,ಯಾವುದೇ ಭಯಬೇಡ ಎಂದು ಅವರು ಭರವಸೆ ನೀಡಿದ್ದಾರೆ.

- Advertisement -

Latest News

error: Content is protected !!