Friday, June 5, 2026
Homeಕರಾವಳಿಮಂಗಳೂರು;ಉದ್ಯಮಿಯೊಬ್ಬರ ಖಾಸಗಿ ಮಾಹಿತಿಯನ್ನು ಬಹಿರಂಗಗೊಳಿಸುವ ಬೆದರಿಕೆ; ರಾಜ್ಯ ಹಿಂದೂ ಮಹಾ ಸಭಾದ ಅಧ್ಯಕ್ಷ ರಾಜೇಶ್‌ ಪವಿತ್ರನ್‌...

ಮಂಗಳೂರು;ಉದ್ಯಮಿಯೊಬ್ಬರ ಖಾಸಗಿ ಮಾಹಿತಿಯನ್ನು ಬಹಿರಂಗಗೊಳಿಸುವ ಬೆದರಿಕೆ; ರಾಜ್ಯ ಹಿಂದೂ ಮಹಾ ಸಭಾದ ಅಧ್ಯಕ್ಷ ರಾಜೇಶ್‌ ಪವಿತ್ರನ್‌ ಅರೆಸ್ಟ್

- Advertisement -
- Advertisement -

ಮಂಗಳೂರು;  ಉದ್ಯಮಿಯೋಬ್ಬರ ಖಾಸಗಿ ಮಾಹಿತಿಯನ್ನು ವೈರಲ್ ಮಾಡುವ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಹಿಂದೂ ಮಹಾ ಸಭಾದ ಅಧ್ಯಕ್ಷರಾದ  ರಾಜೇಶ್‌ ಪವಿತ್ರನ್‌ ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ.

ಕಾವೂರು ನಿವಾಸಿ ಸುರೇಶ್‌ ಸುರತ್ಕಲ್‌ನಲ್ಲಿ ರಾಜೇಶ್‌ ಪವಿತ್ರನ್‌ ಜತೆ ಪಾಲುದಾರಿಕೆಯಲ್ಲಿ ವ್ಯವಹಾರ ನಡೆಸಲು ಮುಂದಾಗಿದ್ದರು. ಆದರೆ ರಾಜೇಶ್‌ ಪವಿತ್ರನ್‌ನ ಅವ್ಯವಹಾರಗಳು ಗಮನಕ್ಕೆ ಬಂದು ಪಾಲುದಾರಿಕೆಯಿಂದ ಹೊರಬರಲು ನಿರ್ಧರಿಸಿದ್ದರು.

ಇದರಿಂದ ರಾಜೇಶ್, ಸುರೇಶ್‌ ಅವರ ಲ್ಯಾಪ್‌ ಟಾಪ್‌ ವಶಕ್ಕೆ ಪಡೆದು ಹೆಚ್ಚುವರಿ ಹಣ ನೀಡಬೇಕು, ಇಲ್ಲದಿದ್ದಲ್ಲಿ ಅದರಲ್ಲಿದ್ದ ಖಾಸಗಿ ಮಾಹಿತಿ ಬಹಿರಂಗ ಪಡಿಸುತ್ತೇನೆ ಮಾತ್ರವಲ್ಲ ಕೈ,ಕಾಲು ಮುರಿಯುವುದಾಗಿ ಬೆದರಿಕೆ ಹಾಕಿದ್ದರು ಎಂದು ಆರೋಪಿಸಲಾಗಿದೆ.ಈ ಬಗ್ಗೆ ಸುರೇಶ್‌ ಸುರತ್ಕಲ್‌ ಠಾಣೆಯಲ್ಲಿ ದೂರು ನೀಡಿದ್ದು, ಅದರಂತೆ ಪೊಲೀಸರು ಬಂಧಿಸಿದ್ದಾರೆ.

- Advertisement -

Latest News

error: Content is protected !!