- Advertisement -
- Advertisement -
ಬೆಂಗಳೂರು: ಇಲ್ಲಿನ ಕೆಮ್ ಟ್ರೆಂಡ್ ಕಂಪೆನಿಯ ಸಿಇಒ ಶ್ರೀ ರಾಜೇಶ್ ಫಡ್ಕೆ, ಇಂಡಸ್ಟ್ರಿ ಡೆವಲಪ್ಮೆಂಟ್ ಮತ್ತು ಸೇಲ್ಸ್ ಮ್ಯಾನೇಜರ್ ಶ್ರೀ ರೋಮಿನ್ ಬೋಸ್ ಮತ್ತು ಶ್ರೀ ರಾಮ ರಾವ್ ಕುಮಾರ್ ರವರು ಜೂನ್ 18 ರಂದು ಸೌತಡ್ಕ, ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರ ಪುನಶ್ಚೇತನ ಕೇಂದ್ರ ಸೇವಾಧಾಮಕ್ಕೆ ಮತ್ತು ಕನ್ಯಾಡಿ ಸೇವಾನಿಕೇತನಕ್ಕೆ ಭೇಟಿ ನೀಡಿ ಕನ್ಯಾಡಿಯಲ್ಲಿ ನಿರ್ಮಾಣವಾಗುತ್ತಿರುವ ನೂತನ ಪುನಶ್ಚೇತನ ಕೇಂದ್ರದ ಕಾಮಗಾರಿಯನ್ನು ವೀಕ್ಷಿಸಿದರು.
ಕಂಪನಿಯ CSR ನ ಅನುದಾನ ಪತ್ರವನ್ನು ಹಸ್ತಾಂತರಿಸಿ ಕಟ್ಟಡ ನಿರ್ಮಾಣ ಶೀಘ್ರವಾಗಿ ನೆರವೇರುವಂತೆ ಶುಭಹಾರೈಸಿದರು.
ಈ ಸಂದರ್ಭದಲ್ಲಿ ಕೊಕ್ಕಡ, ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ಅಧ್ಯಕ್ಷರಾದ ಶ್ರೀ ಕೃಷ್ಣ ಭಟ್, ಸಂಸ್ಥೆಯ ಸಂಸ್ಥಾಪಕರಾದ ಶ್ರೀ ಕೆ. ವಿನಾಯಕ ರಾವ್, ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರು, ಆರೈಕೆದಾರರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
- Advertisement -