ಬೆಳ್ತಂಗಡಿ : ಸಿ.ಎಂ ಸಿದ್ದರಾಮಯ್ಯ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ರೀತಿಯಲ್ಲಿ ಮಾತಾನಾಡಿದ ಆಡಿಯೋ ವೈರಲ್ ಅಗಿದ್ದು. ಈ ಬಗ್ಗೆ ಕಾಂಗ್ರೆಸ್ ಕಾರ್ಯಕರ್ತ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ನ.19 ರಂದು ಸಂಜೆ ದೂರು ನೀಡಿದ್ದು ಅದರಂತೆ ಧರ್ಮಸ್ಥಳ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿ ಪ್ರಕರಣ ದಾಖಲಾದ ಬಳಿಕ ಬಂಧನದ ಬಿತ್ತಿಯಿಂದ ಮೊಬೈಲ್ ಸ್ವೀಟ್ ಆಫ್ ಮಾಡಿ ಓಡಿ ಹೋಗಿ ನಾಪತ್ತೆಯಾಗಿದ್ದಾನೆ.
ಆರೋಪಿ ಬಂಧನಕ್ಕೆ ಕಾರ್ಯಾಚರಣೆ: ಪ್ರಕರಣ ದಾಖಲಾದ ಬಳಿಕ ಧರ್ಮಸ್ಥಳ ಪೊಲೀಸ ತಂಡ ಆರೋಪಿ ರಜಿತ್ ಕೊಕ್ಕಡ ಮನೆಗೆ ಭಾನುವಾರ ರಾತ್ರಿ ಬಂಧಿಸಲು ಕಾರ್ಯಾಚರಣೆ ನಡೆಸಿದ್ದರು. ಈ ವೇಳೆ ಆರೋಪಿ ರಜಿತ್ ಕೊಕ್ಕಡ ಮನೆಬಿಟ್ಟು ಮೊದಲೇ ಪರಾರಿಯಾಗಿದ್ದ ಎಂಬ ಮಾಹಿತಿ ಮಹಾಎಕ್ಸ್ ಪ್ರೆಸ್ ವೆಬ್ ಸೈಟ್ ಗೆ ಮೂಲಗಳಿಂದ ತಿಳಿದು ಬಂದಿದೆ. ಆರೋಪಿಗಾಗಿ ಧರ್ಮಸ್ಥಳ ಪೊಲೀಸರು ಬಲೆ ಬಿಸಿದ್ದಾರೆ.
ಘಟನೆ ವಿವರ: ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಕೋರಿಗದ್ದೆ ನಿವಾಸಿಯಾಗಿರುವ ವೃತ್ತಿಯಲ್ಲಿ ಸೆಲೂನ್ ಅಂಗಡಿಯಲ್ಲಿ ಕೆಲಸ ಮಾಡುವ ಕೊಕ್ಕಡ ಬಿಜೆಪಿ ಕಾರ್ಯಕರ್ತನಾಗಿರುವ ರಜಿತ್ ಕೊಕ್ಕಡ @ ರಜಿತ್ ಭಂಡಾರಿ ಎಂಬಾತ ಸಾಮಾಜಿಕ ಜಾಲತಾಣದಲ್ಲಿ ಸಿದ್ದರಾಮಯ್ಯ ಬಗ್ಗೆ ಅಶ್ಲೀಲವಾಗಿ ನಿಂದಿಸಿ ಮಾತಾನಾಡಿರುವ ಆಡಿಯೋ ಹರಿಬಿಟ್ಟಿದ್ದು ಇದರ ಬಗ್ಗೆ ಬೆಳ್ತಂಗಡಿ ಕಾಂಗ್ರೆಸ್ ಕಾರ್ಯಕರ್ತ ಹಕಿಮ್ ಕೊಕ್ಕಡ ಧರ್ಮಸ್ಥಳ ಪೊಲೀಸ್ ಠಾಣೆಗೆ ನ.19 ರಂದು ದೂರು ನೀಡಿದ್ದರು.
ಎಫ್ಐಆರ್ ದಾಖಲು: ಧರ್ಮಸ್ಥಳ ಪೊಲೀಸರು ಆರೋಪಿ ಕೊಕ್ಕಡ ಗ್ರಾಮದ ಕೋರಿಗದ್ದೆ ನಿವಾಸಿ ರಜಿತ್ ಕೊಕ್ಕಡ @ ರಜಿತ್ ಭಂಡಾರಿ ಮೇಲೆ ಐಪಿಸಿ 1860 (u/s 153A,504,505(2)) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.