- Advertisement -
- Advertisement -
ಕಾಪು : ಬಿಹಾರದಿಂದ ರಾಜ್ಯಸಭೆಗೆ ಚುನಾಯಿತರಾಗಿರುವ ಕಾಪು ಉಳಿಯಾರಗೋಳಿಯ ದಿ| ಗಿರಿಜಾ ಮುದ್ದಣ್ಣ ಶೆಟ್ಟಿ ಅವರ ಮೊಮ್ಮಗ ಅನಿಲ್ ಪ್ರಸಾದ್ ಹೆಗ್ಡೆ ಅವರು ಮಂಗಳವಾರ ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ಪ್ರಸಾದ ಸ್ವೀಕರಿಸಿ, ದೇಗುಲದ ಸಮಗ್ರ ಜೀರ್ಣೋದ್ಧಾರ ಕಾಮಗಾರಿಯನ್ನು ವೀಕ್ಷಿಸಿದರು.
ಈ ಸಂದರ್ಭ ಮಾತನಾಡಿದ ಅವರು, ತಾನು ಶ್ರೀ ಮಾರಿಯಮ್ಮ ದೇವಿಯ ಭಕ್ತನಾಗಿದ್ದು ಚಿಕ್ಕಂದಿನಿಂದಲೂ ಮಾರಿಯಮ್ಮ ದೇವಿಯ ದರ್ಶನಕ್ಕಾಗಿ ಬರುತ್ತಿದ್ದೆವು. ಪ್ರಸ್ತುತ ವಾಸುದೇವ ಶೆಟ್ಟಿ ಅವರ ನೇತೃತ್ವದಲ್ಲಿ ಹೊಸ ಮಾರಿಗುಡಿಯು ಸಮಗ್ರ ಜೀರ್ಣೋದ್ಧಾರಗೊಳ್ಳುತ್ತಿರುವುದು ಸಂತಸದ ವಿಚಾರವಾಗಿದೆ. ಇಲ್ಲಿನ ಜೀರ್ಣೋದ್ದಾರ ಕಾರ್ಯಗಳಿಗೆ ತಾವು ಕೂಡಾ ಕೈ ಜೋಡಿಸುವುದಾಗಿ ಭರವಸೆ ನೀಡಿದರು. ಮಾರಿಯಮ್ಮ ದೇವಿಯ ಭಕ್ತರು ಜಗದಗಲಕ್ಕೂ ಹರಡಿದ್ದು ಎಲ್ಲರ ಸಹಕಾರದೊಂದಿಗೆ ಅಮ್ಮನ ದೇಗುಲ ಮಾದರಿಯಾಗಿ ನಿರ್ಮಾಣಗೊಳ್ಳಲಿ ಎಂದು ಹಾರೈಸಿದರು.
- Advertisement -