Wednesday, June 24, 2026
Homeತಾಜಾ ಸುದ್ದಿಕರ್ನಾಟಕದ 4 ರಾಜ್ಯಸಭಾ ಚುನಾವಣೆ ಘೋಷಣೆ; ಜೂನ್ 18 ರಂದು ಮತದಾನ

ಕರ್ನಾಟಕದ 4 ರಾಜ್ಯಸಭಾ ಚುನಾವಣೆ ಘೋಷಣೆ; ಜೂನ್ 18 ರಂದು ಮತದಾನ

- Advertisement -
- Advertisement -

ನವದೆಹಲಿ: ಕರ್ನಾಟಕ ಸೇರಿದಂತೆ ಹತ್ತು ರಾಜ್ಯಗಳಿಂದ ರಾಜ್ಯಸಭೆಗೆ ನಡೆಯುವ ದ್ವೈವಾರ್ಷಿಕ ಚುನಾವಣೆಗೆ ಚುನಾವಣಾ ಆಯೋಗ ವೇಳಾಪಟ್ಟಿ ಘೋಷಿಸಿದೆ. ಜೂನ್ 18 ರಂದು ಮತದಾನ ನಡೆಯಲಿದೆ.

ರಾಜ್ಯದಿಂದ ಜೂನ್ 25ಕ್ಕೆ ನಾಲ್ಕು ಸ್ಥಾನಗಳು ತೆರವಾಗಲಿದ್ದು, ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ಮಾಜಿ ಪ್ರಧಾನಮಂತ್ರಿ ಹೆಚ್.ಡಿ. ದೇವೇಗೌಡ, ಈರಣ್ಣ ಕಡಾಡಿ ಮತ್ತು ಕೆ. ನಾರಾಯಣ ಅವರ ಅವಧಿ ಮುಕ್ತಾಯಗೊಳ್ಳಲಿದೆ.

ಜೂನ್ 1 ರಂದು ಚುನಾವಣಾ ಅಧಿಸೂಚನೆ ಹೊರಬೀಳಲಿದ್ದು, ನಾಮಪತ್ರ ಸಲ್ಲಿಕೆಗೆ ಜೂನ್ 8 ಕೊನೆಯ ದಿನವಾಗಿದೆ. ಜೂನ್ 9 ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ಜೂನ್ 11 ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದೆ.

ಕರ್ನಾಟಕ ಸೇರಿ ಒಟ್ಟು ಹತ್ತು ರಾಜ್ಯಗಳಿಂದ ತೆರವಾಗುವ ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿದೆ.

- Advertisement -

Latest News

error: Content is protected !!