Saturday, April 27, 2024
Homeಕರಾವಳಿಮಂಗಳೂರು ಹೊರವಲಯದ ಖಾಸಗಿ ಶಾಲೆಯಲ್ಲಿ ಮಕ್ಕಳ ಕೈಯಲ್ಲಿದ್ದ ರಾಖಿ ಕಿತ್ತೆಸೆದ ಆರೋಪ:ಶಿಕ್ಷಕರಿಗೆ ಮಕ್ಕಳ ಪೋಷಕರಿಂದ ತರಾಟೆ

ಮಂಗಳೂರು ಹೊರವಲಯದ ಖಾಸಗಿ ಶಾಲೆಯಲ್ಲಿ ಮಕ್ಕಳ ಕೈಯಲ್ಲಿದ್ದ ರಾಖಿ ಕಿತ್ತೆಸೆದ ಆರೋಪ:ಶಿಕ್ಷಕರಿಗೆ ಮಕ್ಕಳ ಪೋಷಕರಿಂದ ತರಾಟೆ

spot_img
- Advertisement -
- Advertisement -

ಮಂಗಳೂರು: ಮಕ್ಕಳ ಕೈಯ್ಯಲ್ಲಿದ್ದ ರಕ್ಷಾ ಬಂಧನದ ರಾಖಿಯನ್ನು ಶಾಲೆಯಲ್ಲಿ ಕಿತ್ತು ಹಾಕಿದ ಆರೋಪದ ಹಿನ್ನೆಲೆಯಲ್ಲಿ ಪೋಷಕರು‌ ಮತ್ತು ಬಿಜೆಪಿ ಕಾರ್ಯಕರ್ತರಿಂದ ಶಾಲೆಗೆ ಮುತ್ತಿಗೆ ಹಾಕಲ್ಪಟ್ಟು ಆಕ್ರೋಶ ವ್ಯಕ್ತವಾಗಿದೆ.

ಮಂಗಳೂರು ಹೊರವಲಯದಲ್ಲಿರುವ ಕಾಟಿಪಳ್ಳದ ಇನ್ಫೆಂಟ್ ಮೇರಿ ಆಂಗ್ಲ ಮಾಧ್ಯಮ ಶಾಲೆ ಖಾಸಗಿ ಶಾಲೆಯಲ್ಲಿ ಘಟನೆ ನಡೆದಿದೆ.ನಿನ್ನೆ ‌ರಕ್ಷಾಬಂಧನ ಹಬ್ಬದ ಹಿನ್ನೆಲೆಯಲ್ಲಿ ಮಕ್ಕಳು ಕೈಗೆ ರಾಖಿ ಕಟ್ಟಿಕೊಂಡು ಶಾಲೆಗೆ ಬಂದಿದ್ದರು ಎನ್ನಲಾಗಿದೆ.

ಈ ವೇಳೆ ಕೆಲವು ಶಿಕ್ಷಕರು ಮಕ್ಕಳ ಕೈಯಲ್ಲಿದ್ದ ರಾಖಿ ಕಿತ್ತು ಕಸದ ಬುಟ್ಟಿಗೆ ಎಸೆದಿರುವ ಆರೋಪ ಕೇಳಿ ಬಂದಿದೆ. ಹೀಗಾಗಿ ವಿದ್ಯಾರ್ಥಿಗಳ ಪೋಷಕರು ಶಾಲೆಗೆ ಆಗಮಿಸಿ ಮುಖ್ಯಶಿಕ್ಷಕ ಮತ್ತು ಶಿಕ್ಷಕರನ್ನು ತರಾಟೆಗೆ ತೆಗೆದುಕೊಂಡಿದ್ದು, ಬಿಜೆಪಿ ಯುವ ಮೋರ್ಛಾ ಕಾರ್ಯಕರ್ತರಿಂದಲೂ ಶಾಲಾಡಳಿತದ ವಿರುದ್ದ ಆಕ್ರೋಶ ವ್ಯಕ್ತವಾಗಿದೆ.

ಪೋಷಕರು ‌ಮತ್ತು ಶಿಕ್ಷಕರ ವಾಗ್ವಾದದ ಕಾರಣದಿಂದ ಶಾಲೆಗೆ ಸುರತ್ಕಲ್ ಪೊಲೀಸರು ಭೇಟಿ ನೀಡಿದ್ದು, ಫ್ರೆಂಡ್ ಶಿಪ್ ಬ್ಯಾಂಡ್ ಎಂದು ತಿಳಿದು ತೆಗೆಸಿದ್ದಾಗಿ ಶಿಕ್ಷಕರ ಸಮಜಾಯಿಷಿ ಕೊಟ್ಟಿದ್ದಾರೆ ಎಂದು ಹೇಳಲಾಗಿದೆ.

- Advertisement -
spot_img

Latest News

error: Content is protected !!