Friday, May 3, 2024
Homeಕರಾವಳಿಸಹಕಾರಿ ಬ್ಯಾಂಕ್ ಸಿಬ್ಬಂದಿಗೂ ಕೊರೋನಾ ವಾರಿಯರ್ಸ್ ಸೌಲಭ್ಯ ಸಿಗಲಿ: ರಕ್ಷಿತ್ ಪಣೆಕ್ಕರ

ಸಹಕಾರಿ ಬ್ಯಾಂಕ್ ಸಿಬ್ಬಂದಿಗೂ ಕೊರೋನಾ ವಾರಿಯರ್ಸ್ ಸೌಲಭ್ಯ ಸಿಗಲಿ: ರಕ್ಷಿತ್ ಪಣೆಕ್ಕರ

spot_img
- Advertisement -
- Advertisement -

ಬೆಳ್ತಂಗಡಿ: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಆರ್ಥಿಕ ವ್ಯವಸ್ಥೆಗೆ ರಾಷ್ಟೀಕೃತ ಬ್ಯಾಂಕ್ ಗಳಿಗೆ ಸರಿಸಮನಾಗಿ ಸಹಕಾರಿ ಸಂಸ್ಥೆಗಳು ಗ್ರಾಹಕರಿಗೆ ಸೇವೆ ಸಲ್ಲಿಸುತ್ತಿದೆ. ಸಹಕಾರಿ ಕ್ಷೇತ್ರದ ಸಿಬ್ಬಂದಿಯ ಅಮೂಲ್ಯ ಸೇವೆಯನ್ನು ಪರಿಗಣಿಸಿ ಸರಕಾರ ಆದ್ಯತೆಯ ಮೇರೆಗೆ ಕೊರೊನಾ ಲಸಿಕೆ ವಿತರಣೆ ಹಾಗೂ ಇತರ ಕೊರೊನಾ ವಾರಿಯರ್ಸ್ ಗಳ ಸೌಲಭ್ಯವನ್ನು ಸಿಬ್ಬಂದಿಗೆ ವಿಸ್ತರಿಸಬೇಕೆಂದು ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಕ್ಷಿತ್ ಪಣೆಕ್ಕರ ಆಗ್ರಹಿಸಿದ್ದಾರೆ.

ಕೊರೊನಾ ಸಂದರ್ಭದಲ್ಲಿಯೂ ಗ್ರಾಮೀಣ ಆರ್ಥಿಕತೆಯಲ್ಲಿ ಸಹಕಾರಿ ಸಂಘಗಳು ಮಹತ್ವದ ಪಾತ್ರವಹಿಸಿದೆ. ಕೊರೊನಾ ಸಂಕಷ್ಟದ ಸಂದರ್ಭದಲ್ಲೂ ನಮ್ಮ ಸಹಕಾರಿ ಸಂಸ್ಥೆಯ ಸಿಬ್ಬಂದಿ ಕೊರೊನಾ ವಾರಿಯರ್ಸ್ ಮಾದರಿಯಲ್ಲಿ ತಮ್ಮ ಗ್ರಾಹಕರಿಗೆ ಬ್ಯಾಂಕಿಂಗ್ ಹಾಗೂ ಪಡಿತರ ವಿತರಣೆ,ಹಾಗೂ ರೈತರಿಗೆ ತಮ್ಮ ಬೆಳೆ ಬೆಳೆಯಲು ಯಾವುದೇ ಸಮಸ್ಯೆ ಬಾರದ ರೀತಿಯಲ್ಲಿ ರಸಗೊಬ್ಬರ,ಮೈಲುತುತ್ತು ವಿತರಣಾ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ತಮ್ಮ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -
spot_img

Latest News

error: Content is protected !!