Sunday, May 19, 2024
Homeಕರಾವಳಿಮಂಗಳೂರುಬೆಳ್ತಂಗಡಿ : ತುಮಕೂರು ಮೂವರಿದ್ದ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣ:ತುಮಕೂರಿನಲ್ಲಿ ಗೃಹಸಚಿವರನ್ನು ಭೇಟಿಯಾದ ರಕ್ಷಿತ್ ಶಿವರಾಂ

ಬೆಳ್ತಂಗಡಿ : ತುಮಕೂರು ಮೂವರಿದ್ದ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣ:ತುಮಕೂರಿನಲ್ಲಿ ಗೃಹಸಚಿವರನ್ನು ಭೇಟಿಯಾದ ರಕ್ಷಿತ್ ಶಿವರಾಂ

spot_img
- Advertisement -
- Advertisement -

ಬೆಳ್ತಂಗಡಿ : ಮೂವರು ಬೆಳ್ತಂಗಡಿ ತಾಲೂಕಿನವರು ಕಾರಿನಲ್ಲಿ ತುಮಕೂರಿಗೆ ಹೋಗಿ ಅಲ್ಲಿ ದುಷ್ಕರ್ಮಿಗಳಿಂದ ಕಾರಿಗೆ ಬೆಂಕಿ ಹಚ್ಚಿ ಹತ್ಯೆ ಮಾಡಿದ ಪ್ರಕರಣ ಸಂಬಂಧ ಗೃಹಸಚಿವ ಪರಮೇಶ್ವರ್ ಅವರ ನಿವಾಸದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅವರು ಮಾ.24 ರಂದು ಸಂಜೆ ಭೇಟಿ ಮಾಡಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಲು ಪೊಲೀಸ್ ಇಲಾಖೆಗೆ ಸೂಚಿಸಲು ಮನವಿ ಮಾಡಿದರು.ಅದಲ್ಲದೆ ಮೃತದೇಹದ ಡಿಎನ್ಎ ಪರೀಕ್ಷೆ ಮಾಡಿ ಕುಟುಂಬಕ್ಕೆ ಹಸ್ತಾಂತರಿಸುವ ಕ್ರಮ ಕೈಗೊಳ್ಳಲು ಮನವಿ ಮಾಡಿದರು. ಈ ವೇಳೆ ತುಮಕೂರು ಪೊಲೀಸ್ ಅಧಿಕಾರಿಯನ್ನು ಗೃಹ ಸಚಿವರು‌ ಕರೆ ಮಾಡಿ ಕರೆಸಿಕೊಂಡು ಪ್ರಕರಣದ ಬಗ್ಗೆ ಮಾಹಿತಿ ಪಡೆದರು. ಪೊಲೀಸ್ ಅಧಿಕಾರಿ ಪ್ರಕರಣದ ಎಲ್ಲಾ ಮಾಹಿತಿಯನ್ನು ಗೃಹಸಚಿವರಿಗೆ ಮತ್ತು ರಕ್ಷಿತ್ ಶಿವರಾಂಗೆ ವಿವರಿಸಿದ್ದು. ಹಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಇನ್ನೂ ಎರಡು ದಿನದ ಒಳಗೆ ಪ್ರಕರಣದ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮಾಡಿ ವಿವರಗಳನ್ನು ತಿಳಿಸಲಾಗುವುದು ಎಂದು ಹೇಳಿದರು.  ಗೃಹಸಚಿವರು ಪ್ರಕರಣ ಬಗ್ಗೆ ಸೂಕ್ತ ತನಿಖೆ ನಡೆಸಿ ನೊಂದ ಕುಟುಂಬಕ್ಕೆ ನ್ಯಾಯ ಒದಗಿಸಲು ಪೊಲೀಸರಿಗೆ ಸೂಚಿಸಿದ್ದಾರೆ.

ತುಮಕೂರು ಎಡಿಷನ್ ಎಸ್ಪಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ ವೇಳೆ ದ.ಕ.ಜಿಲ್ಲಾ ಯೂತ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಫರ್ನಾಂಡೀಸ್ ಮತ್ತು  ಬೆಳ್ತಂಗಡಿ ಕಾಂಗ್ರೆಸ್ ಯೂತ್ ಕಾಂಗ್ರೆಸ್ ಗ್ರಾಮೀಣ ಅಧ್ಯಕ್ಷ ಹಕಿಂ ಕೊಕ್ಕಡ ಜೊತೆಯಲ್ಲಿದ್ದರು.

- Advertisement -
spot_img

Latest News

error: Content is protected !!