Thursday, June 4, 2026
Homeಅಪರಾಧರಾಮ ಸೇನಾ ಸಂಸ್ಥಾಪಕ ಪ್ರಸಾದ್‌ ಅತ್ತಾವರ ಕುರಿ ಬಲಿ, ವಾಮಾಚಾರ ಕೇಸ್: ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ...

ರಾಮ ಸೇನಾ ಸಂಸ್ಥಾಪಕ ಪ್ರಸಾದ್‌ ಅತ್ತಾವರ ಕುರಿ ಬಲಿ, ವಾಮಾಚಾರ ಕೇಸ್: ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರಿಂದ ಪೊಲೀಸ್‌ ಆಯುಕ್ತರಿಗೆ ದೂರು

- Advertisement -
- Advertisement -

ಮಂಗಳೂರು: ಮೈಸೂರಿನ ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಕುರಿ ಬಲಿ, ವಾಮಾಚಾರವನ್ನು ರಾಮ ಸೇನಾ ಸಂಸ್ಥಾಪಕ ಪ್ರಸಾದ್‌ ಅತ್ತಾವರ ಮತ್ತು ಅನಂತ ಭಟ್‌ ಎನ್ನುವವರು ಸೇರಿ ನಡೆಸಿದ್ದಾರೆ ಎನ್ನಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ನಗರ ಪೊಲೀಸ್‌ ಆಯುಕ್ತರಿಗೆ ದೂರು ನೀಡಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನಿಂದ ವಾಟ್ಸಾಪ್‌ ಮೂಲಕ ದೂರು ನೀಡಿರುವ ಸ್ನೇಹಮಯಿ ಕೃಷ್ಣ ಅವರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಎಲ್ಲ ರೀತಿಯ ವೈಜ್ಞಾನಿಕ ಮತ್ತು ಇತರೆ ಸಾಕ್ಷ್ಯಾಧಾರಗಳನ್ನು ಸಂಗ್ರಹ ಮಾಡಿ, ನಿಷ್ಪಕ್ಷಪಾತವಾಗಿ ಸಮಗ್ರ ತನಿಖೆ ನಡೆಸಿ ಸತ್ಯಾಂಶವನ್ನು ಹೊರ ತರಬೇಕು. ಹಾಗೆಯೇ ಇದರ ಹಿಂದೆ ಎಷ್ಟೇ ಪ್ರಭಾವಿ ವ್ಯಕ್ತಿಗಳಿದ್ದರೂ, ತಪ್ಪಿತಸ್ಥರಿಗೆ ಸೂಕ್ತ ಶಿಕ್ಷೆಯನ್ನು ಕೊಡಿಸಬೇಕೆಂದು ಮನವಿ ಮಾಡಿದ್ದಾರೆ.

ತಮ್ಮ ದೂರನ್ನು ಕಮಿಷನರ್‌ ಕಚೇರಿಗೆ ಸ್ಪೀಡ್‌ ಪೋಸ್ಟ್‌ ಮೂಲಕ ಕಳುಹಿಸುವುದಾಗಿಯೂ ಅವರು ತಿಳಿಸಿದ್ದಾರೆ.

- Advertisement -

Latest News

error: Content is protected !!