Thursday, June 4, 2026
Homeತಾಜಾ ಸುದ್ದಿನಿವೃತ್ತ ನ್ಯಾಯಮೂರ್ತಿ, ಮಾಜಿ ರಾಜ್ಯಪಾಲ ರಾಮ ಜೋಯಿಸ್ ನಿಧನ….

ನಿವೃತ್ತ ನ್ಯಾಯಮೂರ್ತಿ, ಮಾಜಿ ರಾಜ್ಯಪಾಲ ರಾಮ ಜೋಯಿಸ್ ನಿಧನ….

- Advertisement -
- Advertisement -

ಬೆಂಗಳೂರು: ನಿವೃತ್ತ ನ್ಯಾಯಮೂರ್ತಿ, ಮಾಜಿ ರಾಜ್ಯಪಾಲ ಹಾಗೂ ಆರೆಸ್ಸೆಸ್‌ನ ಸ್ವಯಂ ಸೇವಕರೂ ಆಗಿದ್ದ ಎಂ. ರಾಮಾ ಜೋಯಿಸ್ (89) ಅವರು ಮಂಗಳವಾರ ಬೆಳಿಗ್ಗೆ 7.30ರ ಸುಮಾರಿಗೆ ಹೃದಯಾಘಾತದಿಂದ ನಿಧನರಾದರು.

1931ರ ಜುಲೈ 27ರಂದು ಶಿವಮೊಗ್ಗ ಜಿಲ್ಲೆಯಲ್ಲಿ ಜನಿಸಿದ ರಾಮಾ ಜೋಯಿಸ್ ಅವರು, ಪಂಜಾಬ್ ಮತ್ತು ಹರ್ಯಾಣ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ಕರ್ತವ್ಯ ನಿರ್ವಹಿಸಿದ್ದರು. ಜಾರ್ಖಂಡ್ ಮತ್ತು ಬಿಹಾರ ರಾಜ್ಯಗಳ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದರು. ಅಲ್ಲದೆ, ಕರ್ನಾಟಕದಿಂದ ರಾಜ್ಯಸಭೆಯ ಸದಸ್ಯರೂ ಆಗಿದ್ದರು.

ನ್ಯಾಯ ಮೂರ್ತಿ ಮ. ರಾಮಾಜೋಯಿಸ್ ರವರು ಇನ್ನಿಲ್ಲ. ಇಂದು ಬೆಳಿಗ್ಗೆ 7.30 ರ ವೇಳೆಗೆ ಅವರು ಕಾಲವಾದರು. ಅವರ ಆತ್ಮಕ್ಕೆ ಸದ್ಗತಿ ದೊರಕಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಚಿವ ಸುರೇಶ್ ಕುಮಾರ್ ಸಂತಾಪ ವ್ಯಕ್ತ ಪಡಿಸಿದ್ದಾರೆ.

- Advertisement -

Latest News

error: Content is protected !!