Friday, June 5, 2026
Homeಕರಾವಳಿಕಡಬ:ಮನೆಯವರು ಆಸ್ಪತ್ರೆಗೆ ಹೋದಾಗ ಕಳ್ಳತನ ಪ್ರಕರಣ; ಆರೋಪಿಗಳ ಹೆಡೆಮುರಿ ಕಟ್ಟಿದ ಪೊಲೀಸರು

ಕಡಬ:ಮನೆಯವರು ಆಸ್ಪತ್ರೆಗೆ ಹೋದಾಗ ಕಳ್ಳತನ ಪ್ರಕರಣ; ಆರೋಪಿಗಳ ಹೆಡೆಮುರಿ ಕಟ್ಟಿದ ಪೊಲೀಸರು

- Advertisement -
- Advertisement -

ಕಡಬ:ಮನೆಯವರು ಆಸ್ಪತ್ರೆಗೆ ಹೋದಾಗ ಮನೆ ಕಳ್ಳತನ ಮಾಡಿದ ಪ್ರಕರಣಕ್ಕೆ ಸಂಬಂಧಿದಂತೆ ಕಡಬ ಪೊಲೀರು ಆರೋಪಿಗಳ ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ.ಸಾದತ್‌ ಆಲಿ ಫರಂಗಿಪೇಟೆ (30) ಹಾಗೂ ಹಮೀದ್‌ ವಳಚ್ಚಿಲ್‌(31) ಬಂಧಿತರು.  

ಆರೋಪಿಗಳು ಮಾ.11ರಂದು ರಾಮಕುಂಜ ಗ್ರಾಮದ ನೆಬಿಸಾ ಅವರ ಮನೆಯ ಹಿಂಬಾಗಿಲಿನ ಕಬ್ಬಿಣದ ಶಟರ್‌ಮುರಿದು, ಬೀಗ ತೆಗೆದು ಕೊಠಡಿಯಲ್ಲಿದ್ದ 8 ಕಪಾಟುಗಳಲ್ಲಿ ನಗದು ಹಾಗೂ ಚಿನ್ನಕ್ಕೆ ಜಾಲಾಡಿದ್ದರು. ಈ ಬಗ್ಗೆ ನೆಬಿಸಾ ಅವರ ಪುತ್ರ ಸಿದ್ದಿಕ್‌ ನೀಡಿದ ದೂರಿನಂತೆ  ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ನೆಬಿಸಾ ಅವರು ಮಗಳು ನಸೀಮಾ, ಅಳಿಯ ನಾಸೀರ್‌ ಹಾಗೂ ಮಕ್ಕಳೊಂದಿಗೆ ಮಾ.7ರಂದು ಮನೆಗೆ ಬೀಗ ಹಾಕಿ ನಸೀಮಾ ಅವರ ಹೆರಿಗೆಗಾಗಿ ಮಂಗಳೂರಿನ ಕಣಚೂರು ಆಸ್ಪತ್ರೆಗೆ ತೆರಳಿದ್ದರು. ಮಾ.11ರಂದು ಮಧ್ಯಾಹ್ನ 3.30ರ ವೇಳೆಗೆ ನೆಬಿಸಾ ಸಂಬಂಧಿಕರಾಗಿದ್ದ ಫಾಯಿಸಾ ಅವರು ಈ ಮನೆಗೆ ಬಂದಾಗ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿತ್ತು.

ನಬಿಸಾ ಅವರ ಎದುರಿನ ಮನೆಯ ವರ ಸಿಸಿಟಿವಿಯಲ್ಲಿ ಮಾ.11ರ ಮುಂಜಾನೆ 2.30ರ ವೇಳೆಗೆ ಕಾರಿನಲ್ಲಿ ಬಂದವರು ನೆಬಿಸಾ ಅವರ ಮನೆಗೆ ಹೋಗಿ ಅಲ್ಲಿಂದ ಸುಮಾರು ಹೊತ್ತಿನ ಬಳಿಕ ಬಂದು ಮತ್ತೆ ಕಾರಿನಲ್ಲಿ ತೆರಳಿರುವ ದೃಶ್ಯ ಸೆರೆಯಾಗಿತ್ತು. ಉಪ್ಪಿನಂಗಡಿ ಸರ್ಕಲ್‌ ಇನ್‌ಸ್ಪೆಕ್ಟರ್‌ ರವಿ ಬಿ.ಎಸ್‌., ಕಡಬ ಠಾಣಾ ಕ್ರೈಂ ಪಿಎಸ್ ಐ ಅಕ್ಷಯ್ ಹಾಗೂ ಸಿಬ್ಬಂದಿ ಆರೋಪಿಗಳನ್ನು ಮಾ.25ರಂದು ನೆಬಿಸಾ ಅವರ ಮನೆಗೆ ಕರೆತಂದು ಸ್ಥಳ ಮಹಜರು ನಡೆಸಿದ್ದಾರೆ. ಪ್ರಕರಣದಲ್ಲಿ ಬಂಧಿತ ಇನ್ನೋರ್ವ ಆರೋಪಿ ಸಾದತ್ಆಲಿ ವಿರುದ್ಧ 30ಕ್ಕೂ ಹೆಚ್ಚು ಕಳ್ಳತನ ಪ್ರಕರಣಗಳು ವಿವಿಧ ಠಾಣೆಯಲ್ಲಿ ದಾಖಲಾಗಿವೆ.

- Advertisement -

Latest News

error: Content is protected !!