- Advertisement -
![]()
- Advertisement -
ಬೆಂಗಳೂರು ಉಸ್ತುವಾರಿ ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಹಿರಿಯ ಕಾಂಗ್ರೆಸ್ ನಾಯಕ ರಾಮಲಿಂಗಾರೆಡ್ಡಿ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ.
ತಮಗೆ ಜಲಸಂಪನ್ಮೂಲ ಖಾತೆ ನೀಡಿ, ನಿರೀಕ್ಷಿತ ಬೆಂಗಳೂರು ನಗರಾಭಿವೃದ್ಧಿ ಖಾತೆಯನ್ನು ಕೃಷ್ಣ ಭೈರೇಗೌಡ ಅವರಿಗೆ ನೀಡಿರುವುದು ಅವರ ಅಸಮಾಧಾನಕ್ಕೆ ಕಾರಣವಾಗಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ನನ್ನ ಆತ್ಮಸಾಕ್ಷಿಗೆ ವಿರುದ್ಧವಾಗಿ ಕೆಲಸ ಮಾಡಲು ಸಾಧ್ಯವಿಲ್ಲ, ಯಾರೇ ಒತ್ತಾಯಿಸಿದರೂ ರಾಜೀನಾಮೆ ವಾಪಸ್ ಪಡೆಯುವುದಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.
ಮಾಜಿ ಮೇಯರ್ ಮಂಜುನಾಥ್ ಮೂಲಕ ತಮ್ಮ ರಾಜೀನಾಮೆ ಪತ್ರವನ್ನು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರಿಗೆ ತಲುಪಿಸುವುದಾಗಿ ತಿಳಿಸಿರುವ ಅವರು, ಸಚಿವ ಸ್ಥಾನ ತ್ಯಜಿಸಿದರೂ ಕಾಂಗ್ರೆಸ್ ಶಾಸಕರಾಗಿ ಮುಂದುವರಿಯುವುದಾಗಿ ದೃಢವಾಗಿ ಹೇಳಿದ್ದಾರೆ.
- Advertisement -


