Saturday, June 27, 2026
Homeತಾಜಾ ಸುದ್ದಿರಾಮಲಿಂಗಾರೆಡ್ಡಿ ರಾಜೀನಾಮೆ ವಾಪಸ್ ಪಡೆದಿದ್ದಾರೆ; ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲಾ ಹೇಳಿಕೆ

ರಾಮಲಿಂಗಾರೆಡ್ಡಿ ರಾಜೀನಾಮೆ ವಾಪಸ್ ಪಡೆದಿದ್ದಾರೆ; ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲಾ ಹೇಳಿಕೆ

- Advertisement -
- Advertisement -

ಬೆಂಗಳೂರು: ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ನೀಡಿದ್ದ ರಾಜೀನಾಮೆಯನ್ನು ವಾಪಸ್ ಪಡೆದುಕೊಂಡಿದ್ದಾರೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಹೇಳಿದ್ದಾರೆ.

ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿದ ರಣದೀಪ್ ಸಿಂಗ್ ಸುರ್ಜೇವಾಲಾ, ಸಚಿವ ಸ್ಥಾನದಲ್ಲಿ ಮುಂದುವರಿಯಲಿದ್ದಾರೆ ಎಂದು ಹೇಳಿದ್ದಾರೆ.ಆದರೆ ರಾಜೀನಾಮೆ ವಾಪಸ್ ಪಡೆದಿರುವ ಬಗ್ಗೆ ಇನ್ನೂ ರಾಮಲಿಂಗಾರೆಡ್ಡಿ ಇನ್ನೂ ಯಾವುದೇ ಸ್ಪಷ್ಟೀಕರಣ ನೀಡಿಲ್ಲ. ಇಂದು ಎರಡು ಬಾರಿ ರಾಮಲಿಂಗಾರೆಡ್ಡಿ ಸುರ್ಜೇವಾಲಾ ಭೇಟಿ ಮಾಡಿದ್ದು, ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರನ್ನೂ ಭೇಟಿ ಮಾಡಿದ್ದರು. ರಾಮಲಿಂಗಾರೆಡ್ಡಿ ಭೇಟಿಯ ಬಳಿಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕೂಡಾ ರಣದೀಪ್ ಸಿಂಗ್ ಸುರ್ಜೇವಾಲಾ ಅವರನ್ನು ಖಾಸಗಿ ಹೋಟೆಲ್ ನಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದ್ದರು.

- Advertisement -

Latest News

error: Content is protected !!