Saturday, June 27, 2026
Homeಕರಾವಳಿನಾನು ರಾಜಕೀಯ ನಿವೃತ್ತಿಯಾಗುತ್ತೇನೆ ಎಂದು ಹೇಳಿಲ್ಲ; ಉಲ್ಟಾ ಹೊಡೆದ ಮಾಜಿ ಸಚಿವ ರಮಾನಾಥ ರೈ

ನಾನು ರಾಜಕೀಯ ನಿವೃತ್ತಿಯಾಗುತ್ತೇನೆ ಎಂದು ಹೇಳಿಲ್ಲ; ಉಲ್ಟಾ ಹೊಡೆದ ಮಾಜಿ ಸಚಿವ ರಮಾನಾಥ ರೈ

- Advertisement -
- Advertisement -

ಮಂಗಳೂರು: ಬಂಟ್ವಾಳ ವಿಧಾನಸಭಾ ಕ್ಷೇತ್ರದಿಂದ ತಾವು ಸ್ಪರ್ಧಿಸಿ ಸೋಲು ಅನುಭವಿಸಿದ್ದರಿಂದ ಮಾಜಿ ಸಚಿವ ರಮಾನಾಥ ರೈ ನಾನು ರಾಜಕೀಯದಿಂದ ನಿವೃತ್ತಿ ಪಡೆಯುತ್ತೇನೆ ಎಂದು ಕೆಲವು ದಿನಗಳ ಹಿಂದೆ ಹೇಳಿದ್ದರು. ಆದರೆ ಈಗ ಅವರು ಉಲ್ಟಾ ಹೊಡೆದಿದ್ದಾರೆ

ನಾನು ರಾಜಕೀಯ ನಿವೃತ್ತಿಯಾಗುತ್ತೇನೆ ಎಂದು ಹೇಳಿಲ್ಲ. ಸಕ್ರೀಯ ರಾಜಕಾರಣದಲ್ಲಿ ಇರುತ್ತೇನೆ ಎಂಬುದಾಗಿ ತಿಳಿಸಿದ್ದಾರೆ.ಇಂದು ಪಾಣೆ ಮಂಗಳೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ನಾನು ಕಾಂಗ್ರೆಸ್ ಪಕ್ಷ ನೀಡುವಂತ ಜವಾಬ್ದಾರಿಗೆ ಬದ್ಧನಾಗಿದ್ದೇನೆ. 2024 ಲೋಕಸಭಾ ಚುನಾವಣೆಗೆ ಈಗಿನಿಂದಲೇ ತಯಾರಿಯನ್ನು ಆರಂಭಿಸಲಾಗುತ್ತದೆ ಎಂದು ಹೇಳಿದ್ದಾರೆ.

ನಾನು ಗೆದ್ದರೆ ಅಕ್ರಮ ಮರಳುಗಾರಿಕೆಗೆ ಕಡಿವಾಣ ಬೀಳುತ್ತದೆ ಎಂಬುದಾಗಿ, ಅಕ್ರಮ ಮರಳು ದಂಧೆಕೋರರು ನನ್ನನ್ನು ಸೋಲಿಸಿದರು. ವಯಸ್ಸಾಗಿದೆ ಎಂಬುದಾಗಿ ಅಪಪ್ರಚಾರವನ್ನು ಕೆಲವರು ಮಾಡಿದರು ಎಂಬುದಾಗಿ ಆಕ್ರೋಶ ವ್ಯಕ್ತ ಪಡಿಸಿದರು.

ಕಾಂಗ್ರೆಸ್ ಪಕ್ಷವನ್ನು ಸಂಘಟಿಸುವಂತ ಕೆಲಸದಲ್ಲಿ ನಿರತನಾಗಲಿದ್ದೇನೆ. ಪಕ್ಷದ ವರಿಷ್ಠರು ನೀಡುವಂತ ಸೂಚನೆ ಪಾಲಿಸಲಿದ್ದೇನೆ. ಪಕ್ಷದ ಹಿತದೃಷ್ಠಿಯಿಂದ, ಪಕ್ಷಕ್ಕೆ ನನ್ನಿಂದ ಆಗುವಂತ ಕೆಲಸವನ್ನು ಮಾಡುವ ಕಾರ್ಯದಲ್ಲಿ ಸಕ್ರೀಯವಾಗಿ ತೊಡಗಿರಲಿದ್ದೇನೆ ಎಂಬುದಾಗಿ ತಿಳಿಸಿದ್ದಾರೆ.

ನಾನು ಎಲ್ಲಿಯೂ ರಾಜಕೀಯ ನಿವೃತ್ತಿ ಆಗುತ್ತೇನೆ ಎಂದು ಹೇಳಿಲ್ಲ. ಹೈಕಮಾಂಡ್ ಸೂಚಿಸುತ್ತದೆಯೋ ಅದನ್ನು ಪಾಲಿಸುತ್ತೇನೆ ಎಂದಿದ್ದೇನೆ. ಸಕ್ರೀಯ ರಾಜಕಾರಣದಲ್ಲಿ ಮುಂದುವರೆಯುವುದಾಗಿ ಹೇಳಿದ್ದಾರೆ..

- Advertisement -

Latest News

error: Content is protected !!