Sunday, May 5, 2024
Homeಕರಾವಳಿಕಾಂಗ್ರೆಸ್ ನ ಹಿರಿಯ ನಾಯಕ ಜನಾರ್ಧನ ಪೂಜಾರಿ ಅವರ ಆಶೀರ್ವಾದ ಪಡೆದ ರಮಾನಾಥ ರೈ

ಕಾಂಗ್ರೆಸ್ ನ ಹಿರಿಯ ನಾಯಕ ಜನಾರ್ಧನ ಪೂಜಾರಿ ಅವರ ಆಶೀರ್ವಾದ ಪಡೆದ ರಮಾನಾಥ ರೈ

spot_img
- Advertisement -
- Advertisement -

ಬಂಟ್ವಾಳ:  ಬಂಟ್ವಾಳ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿರುವ ಮಾಜಿ ಸಚಿವ ಬಿ. ರಮಾನಾಥ ರೈ ಅವರು ಬುಧವಾರ ಕಾಂಗ್ರೆಸ್ ನ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಜನಾರ್ಧನ ಪೂಜಾರಿ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದು ಅವರ ಆರೋಗ್ಯ ವಿಚಾರಿಸಿದರು.

ಇಂದು  ಬೆಳಿಗ್ಗೆ 9 ಗಂಟೆಗೆ ಬಂಟ್ವಾಳ ಶ್ರೀ ವೆಂಕಟರಮಣ ದೇವಸ್ಥಾನದ ಬಳಿಯಿಂದ ಅಪಾರ ಬೆಂಬಲಿಗರೊಂದಿಗೆ ಮೆರವಣಿಗೆ ಹೊರಟು, ಮಧ್ಯಾಹ್ನ 12:35ಕ್ಕೆ ಮಿನಿವಿಧಾನಸೌಧದಲ್ಲಿ ರಮಾನಾಥ ರೈ ನಾಮಪತ್ರ ಸಲ್ಲಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಬುಧವಾರ ಬೆಳಿಗ್ಗೆ ಜನಾರ್ಧನ ಪೂಜಾರಿ ಅವರ ಬಂಟ್ವಾಳದ ನಿವಾಸಕ್ಕೆ ಭೇಟಿ ನೀಡಿ ಅವರು ಮಾತುಕತೆ ನಡೆಸಿದರು. ಈ ವೇಳೆ  ಚುನಾವಣೆಯಲ್ಲಿ ರಮಾನಾಥ ರೈ ಮತ್ತೊಮ್ಮೆ ಗೆದ್ದುಬರಲಿ ಎಂದು ಹಾರೈಸಿದರು.

ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಕೆ.ಪಿ.ಸಿ.ಸಿ. ಸದಸ್ಯರುಗಳಾದ ಪಿಯೂಸ್ ಎಲ್. ರೊಡ್ರಿಗಸ್, ಚಂದ್ರಪ್ರಕಾಶ್ ಶೆಟ್ಟಿ, ಪ್ರಮುಖರಾದ ಪದ್ಮಶೇಖರ್ ಜೈನ್, ಮಾಯಿಲಪ್ಪ ಸಾಲ್ಯಾನ್ ಮತ್ತಿತರರು ಈ ವೇಳೆ ಉಪಸ್ಥಿತರಿದ್ದರು.

- Advertisement -
spot_img

Latest News

error: Content is protected !!