Thursday, June 4, 2026
Homeತಾಜಾ ಸುದ್ದಿಎಸ್ ಐಟಿ ಮುಂದೆ ವಿಚಾರಣೆಗೆ ಹಾಜರಾದ ರಮೇಶ್ ಜಾರಕಿಹೊಳಿ

ಎಸ್ ಐಟಿ ಮುಂದೆ ವಿಚಾರಣೆಗೆ ಹಾಜರಾದ ರಮೇಶ್ ಜಾರಕಿಹೊಳಿ

- Advertisement -
- Advertisement -

ಬೆಂಗಳೂರು: ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಎಸ್‌ಐಟಿ ವಿಚಾರಣೆಗೆ ಹಾಜರಾಗಿದ್ದಾರೆ. ಆಡುಗೋಡಿ ಟೆಕ್ನಿಕಲ್ ಸೆಂಟರ್‌ನಲ್ಲಿ ವಿಚಾರಣೆ ಹಾಜರಾಗಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಡಿ ಲೇಡಿ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗಳಿಗೆ ಇ-ಮೇಲ್ ಕಳುಹಿಸಿರುವ ಬೆನ್ನಲ್ಲೇ ರಮೇಶ್ ಜಾರಕಿಹೊಳಿ ವಿಚಾರಣೆಗೆ ಹಾಜರಾಗಿದ್ದಾರೆ.

ಈ ಸಿಡಿ ಪ್ರಕರಣ ಇನ್ನೂ ಎಸ್‌ಐಟಿಗೆ ವರ್ಗಾವಣೆಯಾಗಿಲ್ಲ, ಕಬ್ಬನ್‌ಪಾರ್ಕ್ ಠಾಣೆಯಲ್ಲೇ ಪ್ರಕರಣವಿರುವ ಕಾರಣ, ಟೆಕ್ನಿಕಲ್ ವಿಂಗ್‌ನಲ್ಲಿ ಕಬ್ಬನ್ ಪಾರ್ಕ್ ಇನ್‌ಸ್ಪೆಕ್ಟರ್ ಮಾರುತಿ, ಅವರೇ ವಿಚಾರಣೆ ನಡೆಸುತ್ತಿದ್ದಾರೆ. ಕೇಂದ್ರ ವಲಯ ಡಿಸಿಪಿ ಅನುಚಿತ್ ನೇತೃತ್ವದಲ್ಲಿ ವಿಚಾರಣೆ ನಡೆದಿದೆ.

ಯುವತಿ ದೂರು ಆಧರಿಸಿ ರಮೇಶ್ ಜಾರಕಿಹೊಳಿ ವಿಚಾರಣೆ ಮಾಡಲಾಗುತ್ತಿದೆ. ಇನ್ನೇನು ವಿಚಾರಣೆ ಆರಂಭವಾಗಲಿದೆ.  ಅಶ್ಲೀಲ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಡಿ ಲೇಡಿ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗಳಿಗೆ ಇ-ಮೇಲ್ ಕಳುಹಿಸಿದ್ದಾರೆ.

ತಮ್ಮ ನೇತೃತ್ವದಲ್ಲಿ ಎಸ್‌ಐಟಿ ತನಿಖೆ ನಡೆಯಲಿ, ನನ್ನ ತಂದೆ ತಾಯಿಗೆ ರಕ್ಷಣೆ ಕೊಡಿ ಎಂದು ಇ-ಮೇಲ್‌ನಲ್ಲಿ ಮನವಿ ಮಾಡಿದ್ದಾರೆ. ಇಂದು ನ್ಯಾಯಾಲಯದ ಮುಂದೆ ಹಾಜರಾಗುವ ಸಾಧ್ಯತೆ ಇದೆ.

ರಮೇಶ್ ಜಾರಕಿಹೊಳಿ ಪ್ರಭಾವಿ ವ್ಯಕ್ತಿಯಾಗಿದ್ದಾರೆ, ನನ್ನ ಪೋಷಕರಿಗೆ ಸಾರ್ವಜನಿಕವಾಗಿ ಜೀವ ಬೆದರಿಕೆ ಹಾಕಿದ್ದಾರೆ. ಪ್ರಕರಣದಲ್ಲಿ ನನಗೆ ಮತ್ತು ನನ್ನ ಪೋಷಕರಿಗೆ ರಕ್ಷಣೆ ನೀಡಬೇಕು ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಇ-ಮೇಲ್ ಮೂಲಕ ನಿನ್ನೆಯೇ ಪತ್ರವನ್ನು ರವಾನೆ ಮಾಡಿರುವ ಕುರಿತು ಮಾಹಿತಿ ಲಭ್ಯವಾಗಿದೆ.

- Advertisement -

Latest News

error: Content is protected !!