Sunday, June 7, 2026
HomeUncategorizedರಮೇಶ್ ಜಾರಕಿಹೊಳಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಿಡಿಯೋ ವೈರಲ್

ರಮೇಶ್ ಜಾರಕಿಹೊಳಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಿಡಿಯೋ ವೈರಲ್

- Advertisement -
- Advertisement -

ಬೆಳಗಾವಿ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಗೋಕಾಕ್ ತಾಲೂಕು ಆಸ್ಪತ್ರೆಯ ಕೋವಿಡ್ ಕೇರ್ ಸೆಂಟರ್‌ನ ಐಸಿಯು ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಗ್ಗೆ ವಿಡಿಯೋ ವೈರಲ್ ಆಗಿದೆ.

https://youtube.com/shorts/MGgLmX8xQRU

ಗೋಕಾಕ್ ನ ತಾಲೂಕು ಆಸ್ಪತ್ರೆಯ ಐಸಿಯು ವಿಭಾಗದಲ್ಲಿ ರಮೇಶ್ ಜಾರಕಿಹೊಳಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಿಕಿತ್ಸೆ ಪಡೆಯುತ್ತಿರುವ ಬಗ್ಗೆ ಅಲ್ಲಿಯ ಸ್ಥಳೀಯ ವೈದ್ಯರೇ ವಿಡಿಯೋ ಮಾಡಿ ಹರಿ ಬಿಟ್ಟಿದ್ದಾರೆ.

ರಮೇಶ್ ಜಾರಕಿಹೊಳಿ ಅವರನ್ನು ಐಸಿಯುನಲ್ಲಿರಿಸಿ ಚಿಕಿತ್ಸೆ ನೀಡುತ್ತಿರುವುದಾಗಿ ಗೋಕಾಕ್ ತಾಲೂಕು ವೈದ್ಯಾಧಿಕಾರಿ ಡಾ. ರವೀಂದ್ರ ಆಂಟಿನ್ ತಿಳಿಸಿದ್ದಾರೆ.

ಬೆಂಗಳೂರು ಹಾಗೂ ಮಹಾರಾಷ್ಟ್ರಕ್ಕೆ ರಮೇಶ್ ಜಾರಕಿಹೊಳಿ ಹೋಗಿ ಬಂದಿದ್ದರು. ರ‍್ಯಾಪಿಡ್ ಟೆಸ್ಟ್ ಮಾಡಿದ್ದರಿಂದ ಸೋಂಕು ದೃಢಪಟ್ಟಿದೆ. ರಮೇಶ್ ಇರುವ ಆಸ್ಪತ್ರೆಯ ಐಸಿಯು ವಿಭಾಗದ ಮುಂಭಾಗದಲ್ಲಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಜಾರಕಿಹೊಳಿ ಅವರ ಸಂಪರ್ಕಕ್ಕೆ ಬಂದಿರುವ ಕಾರು ಚಾಲಕ ಹಾಗೂ ಅಡುಗೆ ಸಿಬ್ಬಂದಿಗೂ ಸೋಕು ವ್ಯಾಪಿಸಿದೆ. ಇವರನ್ನು ಹೋಂ ಕ್ವಾರಂಟೈನ್ ಮಾಡಲಾಗಿದೆ.

- Advertisement -

Latest News

error: Content is protected !!